ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ.ಜಿಲ್ಲೆ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ವತಿಯಿಂದ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಶ್ರೀರಾಮಕೃಷ್ಣ ಪ್ರೌಢಶಾಲೆ ಕೊಂಬೆಟ್ಟು ಪುತ್ತೂರು ಇದರ ಸಹಕಾರದೊಂದಿಗೆ ಮಕ್ಕಳ ಮಾಸೋತ್ಸವದ ಪ್ರಯುಕ್ತ ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮವು ನ.1ರಂದು ಕೊಂಬೆಟ್ಟು ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.
ಪ್ರಧಾನ ವ್ಯವಹಾರಿಕ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ ಅರ್ಚನಾ ಕೆ ಉಣ್ಣಿತಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಯೊಂದಿಗೆ ಪೂರಕವಾದ ವಾತಾವರಣ ಸೃಷ್ಟಿಸುವಲ್ಲಿ ಕಾನೂನಿನ ನೆರವು ಯಾವ ರೀತಿಯಲ್ಲಿ ದೊರಕುತ್ತದೆ ಎಂಬುದರ ಬಗ್ಗೆ ಮಾತನಾಡಿದರು.
ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳ ಅಭಿವೃದ್ಧಿಗೆ ಇಂತಹ ಮಾಹಿತಿಗಳ ಅವಶ್ಯಕತೆ ಇದೆ ಎಂದರು. ಪ್ಯಾನೆಲ್ ವಕೀಲರು ಹೀರಾ ಉದಯ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಬಂಟರ ಸಂಘ ಪುತ್ತೂರು ಇದರ ಸಂಚಾಲಕ ದಯಾನಂದ ರೈ ಮನವಳಿಕೆ ಶುಭ ಹಾರೈಸಿದರು,
ಮುಖ್ಯ ಅತಿಥಿಗಳಾದ ವಕೀಲರ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಮನೋಹರ ಕೆ ವಿ ಮಕ್ಕಳ ಮೇಲೆ ಆಗುವಂತಹ ದೌರ್ಜನ್ಯಗಳ ಬಗ್ಗೆ ತಿಳುವಳಿಕೆ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ (ರಿ) ದ.ಕ ಇದರ ಅಧ್ಯಕ್ಷೆ ನಯನ ರೈ ಅತಿಥಿಗಳನ್ನು ಗೌರವಿಸಿದರು, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಅಧ್ಯಕ್ಷೆ ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಮಕ್ಕಳ ಮಾಸೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಪ್ರಭಾರ ಮುಖ್ಯಗುರು ಸುನಿತಾ ಸ್ವಾಗತಿಸಿ, ಶಿಕ್ಷಕಿ ಗೀತಾ ವಂದಿಸಿದರು. ಶಿಕ್ಷಣ ಸಂಪನ್ಮೂಲದ ಸದಸ್ಯರಾದ ಅಂಬಿಕಾ ರಮೇಶ, ಪ್ರಶಾಂತ್ ಮುರ, ವತ್ಸಲ ನಾಯಕ್, ಅಶ್ವಿನಿ ರೈ, ಶಿಕ್ಷಕ ವೃಂದದವರು, ಜ್ಯೋತಿ, ಹರೀಶ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.