ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಗಾಂಧಿ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ-ಆಕರ್ಷಕ ಮೆರವಣಿಗೆ

0

ಪುತ್ತೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಪುತ್ತೂರು, ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಪೂರ್ವ, ರೋಟರಿ ಕ್ಲಬ್ ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರಿ ಸಿಟಿ, ಲಯನ್ಸ್ ಕ್ಲಬ್ ಪುತ್ತೂರು, ಜೆಸಿಐ ಪುತ್ತೂರು, ಇನ್ನರ್ ವೀಲ್ ಕ್ಲಬ್ ಪುತ್ತೂರು, ಸ್ಪರ್ಶ ಸಹಾಯವಾಣಿ, ಹಾಗೂ ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಕನ್ನಡ ಧ್ವಜಾರೋಹಣ ಪುತ್ತೂರು ಗಾಂಧಿ ಕಟ್ಟೆಯಲ್ಲಿ ನಡೆಯಿತು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್‌ರವರು ಧ್ವಜಾರೋಹಣ ನೆರವೇರಿಸಿದರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದರು. ನಂತರ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಕಿಲ್ಲೆ ಮೈದಾನದವರೆಗೆ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here