ಚುನಾವಣಾ ಕಾರ್ಯತಂತ್ರ ರೂಪಿಸಲು ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ ಕೋರ್ ಕಮಿಟಿ ರಚನೆ

0

ಪುತ್ತೂರು : ಮುಂದಿನ ವಿಧಾನಸಭಾ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಕಾರ್ಯತಂತ್ರ ರೂಪಿಸಲು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ 17 ಮಂದಿಯ ಕೋರ್ ಕಮಿಟಿ ರಚಿಸಲಾಯಿತು. ನ.1ರಂದು ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಕಮಿಟಿ ರಚಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಂತೆ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ನ ಹಿರಿಯ ಪದಾಧಿಕಾರಿಗಳನ್ನು ಸೇರಿಸಿ ಕೋರ್ ಕಮಿಟಿ ರಚಿಸಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ ಕೆ.ಬಿ., ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ವಂದ್ರ ಆಳ್ವ, ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಅಳಿಕೆ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿ.ಸೋಜ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶಿವರಾಮ ಆಳ್ವ, ರಮಾನಾಥ ವಿಟ್ಲ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಬಸ್ತಿಕಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಉಮಾನಾಥ ಶೆಟ್ಟಿರವರನ್ನು ಕೋರ್ ಕಮಿಟಿಗೆ ಆಯ್ಕೆ ಮಾಡಲಾಯಿತು.

ಕೋರ್ ಕಮಿಟಿ ಪ್ರತೀ 15 ದಿನಕ್ಕೊಮ್ಮೆ ಸಭೆ ಸೇರಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದರು.

LEAVE A REPLY

Please enter your comment!
Please enter your name here