ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ವಿಟ್ಲ ಸಮೀಪ ನಡೆದಿದೆ.
ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36 ವ.) ಮೃತಪಟ್ಟವರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ.
ನ.2ರಂದು ಬೆಳಿಗ್ಗೆ ಅವರ ಶವ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಈ., ಎಸ್.ಐ. ಸಂದೀಪ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.