ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.02 ರಂದು ಅಧಿಕಾರ ಸ್ವೀಕಾರ ಮಾಡಿದರು.

ದ.ಕ ಜಿಲ್ಲಾಧಿಕಾರಿಯಾಗಿದ್ದ ಕೆ.ವಿ. ರಾಜೇಂದ್ರ ಅವರನ್ನು ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾಯಿಸಿತ್ತು, ನಂತರ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಅವರಿಂದ ರವಿಕುಮಾರ್ ಎಂ. ಆರ್. ರವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

ರವಿಕುಮಾರ್ ಅವರು 2012ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಆಗಿದ್ದು, ಈ ಹಿಂದೆ ಆರ್‌ಜಿಯುಎಚ್‌ಎಸ್‌ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here