ನರಿಮೊಗರು ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೇವಾ ಕಾರ್ಯಕ್ರಮ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡುಬಂದ ದೋಷ ಪರಿಹಾರಗಳಿಗಾಗಿ ದೈವಜ್ಞರ ಸೂಚನೆಯಂತೆ ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಬೇರೆ ಬೇರೆ ದೇವಸ್ಥಾನಗಳಿಗೆ ಭೇಟಿ ನೀಡಿ ಸೇವಾ ಕಾರ್ಯಕ್ರಮ ನಡೆಸುತ್ತಿದ್ದು, ನ.2ರಂದು ನರಿಮೊಗರು ಮಜಲುಮಾರು ಉಮಾಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಸೇವೆ ಸಲ್ಲಿಸಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯರವರ ನೇತೃತ್ವದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಸೇವೆಗಳನ್ನು ಸಲ್ಲಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರೊಂದಿಗೆ ಮಜಲುಮಾರು ದೇವಾಲಯದ ಪ್ರಧಾನ ಅರ್ಚಕರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

LEAVE A REPLY

Please enter your comment!
Please enter your name here