ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಪುತ್ತೂರು : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪುತ್ತೂರಿನಿಂದ, ಸಮಾಜ ಸೇವೆಗೆ ಅನಿವಾಸಿ ಭಾರತೀಯ ಉದ್ಯಮಿ ಡಾ|ರವಿ ಶೆಟ್ಟಿ ಮೂಡಂಬೈಲು, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಹಾಗೂ ಯುವವಾಹಿನಿ ಸಂಸ್ಥೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯುವವಾಹಿನಿ ಸಂಸ್ಥೆಯ ಅಧ್ಯಕ್ಷ ಉದಯ ಅಮೀನ್ ಮಟ್ಟುರವರು ಪ್ರಶಸ್ತಿ ಸ್ವೀಕರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಸುನಿಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here