ನಿಯುಕ್ತಿಗೊಂಡ ಸ್ಥಳಕ್ಕೆ ಕರ್ತವ್ಯಕ್ಕೆ ಹಾಜರಾಗಲು ಆದೇಶ
ಪುತ್ತೂರು : 2022-23ನೇ ಸಾಲಿನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್‌ರವರನ್ನು ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್‌ಗೆ ಹಾಗೂ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್‌ರವರನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ಗೆ ವರ್ಗಾವಣೆ ಮಾಡಲಾಗಿದೆ. ಕೂಡಲೇ ನಿಯುಕ್ತಿಗೊಂಡ ಸ್ಥಳಕ್ಕೆ ಕರ್ತವ್ಯಕ್ಕೆ ಹಾಜರಾಗಲು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.
ವರ್ಗಾವಣೆಯಿಂದ ತೆರವಾಗುವ ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಒಳಮೊಗ್ರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಹಾಗೂ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನರಿಮೊಗರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು. ರವರಿಗೆ ವಹಿಸಿ ಆದೇಶಿಸಲಾಗಿದೆ.