ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮೂಲಕ ಪ್ರತಿ ವರ್ಷದಂತೆ 2023ನೇ ವರ್ಷದ ಕ್ಯಾಲೆಂಡರ್ ಅನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಬಿಡುಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಸುದರ್ಶನ ಗೌಡ ಕೆ, ಸಂಜೀವ ಗೌಡ ಕೆ, ಸತೀಶ್ ಪಾಂಬಾರು, ಪ್ರವೀಣ್ ಕುಂಟ್ಯಾನ, ಲೋಕೇಶ್ ಸಿ.ಎಚ್, ಸುಪ್ರೀತಾ ರವಿಚಂದ್ರ, ತೇಜಸ್ವಿನಿ ಶೇಖರ್ ಗೌಡ, ಆಂತರಿಕ ಲೆಕ್ಕಪರಿಶೋಧಕ ಶ್ರೀಧರ್ ಗೌಡ ಕಣಜಾಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಕೆ ಉಪಸ್ಥಿತರಿದ್ದರು.