ಪುತ್ತೂರು : ಎಐಸಿಸಿ ಕಾರ್ಯದರ್ಶಿಯಾಗಿರುವ ಎರ್ನಾಕುಲಂ ಜಿಲ್ಲಾ ಅಂಗಮಾಯಿ ಕ್ಷೇತ್ರದ ಶಾಸಕ ರೋಝಿ ಎಂ.ಜಾನ್‌ರವರು ಪುತ್ತೂರಿಗೆ ಭೇಟಿ ನೀಡಿ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಉಡುಪಿ ಜಿಲ್ಲೆಗೆ ಭೇಟಿ ನೀಡಿದ ರೋಝಿ ಎಂ.ಜಾನ್‌ರವರು ಕೊಡಗಿಗೆ ಭೇಟಿ ನೀಡುವ ದಾರಿ ಮಧ್ಯೆ ಪುತ್ತೂರಿಗೆ ಭೇಟಿ ನೀಡಿದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರುರವರ ಜೊತೆಗೆ ಪುತ್ತೂರಿಗೆ ಆಗಮಿಸಿದ ರೋಝಿ ಎಂ.ಜಾನ್‌ರವರಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್.ಎ ಶಕೂರ್ ಹಾಜಿ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ, ಅಕ್ರಮ ಸಮಿತಿ ಮಾಜಿ ಸದಸ್ಯ ದಿನೇಶ್ ಪಿ.ವಿ., ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ಕಾರ್ಯದರ್ಶಿ ರೋಶನ್ ರೈ ಬನ್ನೂರು, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಅಭಿಷೇಕ್ ಬೆಳ್ಳಿಪ್ಪಾಡಿ, ರಂಜಿತ್ ಬಂಗೇರ, ಲೋಕೇಶ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ `ಸುದ್ದಿ’ಯೊಂದಿಗೆ ಮಾತನಾಡಿದ ರೋಝಿಯವರು ರಾಜ್ಯದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ಉದ್ಧೇಶದಿಂದ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.