ಜಯಕರ್ನಾಟಕ ಜನಪರ ವೇದಿಕೆಯಿಂದ ಒಕ್ಕೆತ್ತೂರು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರ: ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಒಕ್ಕೆತ್ತೂರು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ರಾಜ್ಯೋತ್ಸವ ಆಚರಿಸಲಾಯಿತು. ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವ ಉದ್ಘಾಟಿಸಲಾಯಿತು. 1ರಿಂದ 8ನೇ ತರಗತಿಯ ಮಕ್ಕಳಿಗೆ 3 ವಿಭಾಗಗಳಲ್ಲಿ 10 ಸ್ಪರ್ಧೆಗಳನ್ನು ಹಾಗೂ ಶಿಕ್ಷಕರಿಗೆ ಸ್ಪರ್ಧೆ ನಡೆಸಲಾಯಿತು. ಸಮಾರೋಪ ಸಮಾರಂಭದಲ್ಲಿ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಂಚಾಲಕ, ವಿಟಿವಿ ಮಾಧ್ಯಮ ಸಂಸ್ಥೆಯ ನಿರ್ದೇಶಕ ರಾಮ್‌ದಾಸ್ ಶೆಟ್ಟಿ ವಿಟ್ಲ, ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ, ಎಸ್‌ಡಿಎಂಸಿ ಅಧ್ಯಕ್ಷ ಮೊಹಮ್ಮದ್ ಆರಿಸ್, ಒಕ್ಕೆತ್ತೂರು ಶಾಲಾ ಮುಖ್ಯ ಶಿಕ್ಷಕಿ ಗೀತಾ, ಹಿರಿಯ ಶಿಕ್ಷಕಿ ಮೇರಿ, ಶಾಲಾ ಶಿಕ್ಷಕ ರಾಘವೇಂದ್ರ, ಹಾಗೂ ತೌಸಿಫ್ ಮತ್ತು ಜಯಕರ್ನಾಟಕ ಜನಪರ ವೇದಿಕೆ ಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಸ್ಪರ್ಧಾವಿಜೇತರಿಗೆ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಜಯಕರ್ನಾಟಕ ಜನಪರ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷ ದೀಪಕ್ ಅಮೀನ್, ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಜ್ವತ್ ರೈ, ಪುರಂದರ ರೈ, ರಜತ್ ಆಳ್ವ, ಮನೋಜ್ ರೈ ವಿಟ್ಲ ಹಾಗೂ ವಿಟಿವಿ ಸಿಬ್ಬಂದಿಗಳು, ಶಾಲಾ ಶಿಕ್ಷಕ ವರ್ಗ, ಸಿಬ್ಬಂದಿ ವರ್ಗ, ಶಾಲಾ ಮಕ್ಕಳು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.