ಯುವವಾಹಿನಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು:2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನ.1ರಂದು  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. 
ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ, ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಯುವವಾಹಿನಿಯ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಿದರು. ರೂ. 5 ಲಕ್ಷ ನಗದು, 25 ಗ್ರಾಂ ತೂಕದ ರಾಜ್ಯೋತ್ಸವ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕಗಳೊಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್, ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗೂಢಚಾರ್, ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಹಾಗೂ ಇಲಾಖೆಯ ಕಾರ್ಯದರ್ಶಿ, ಡಾ. ಮಂಜುಳಾ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ  ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷ ಉಮೇಶ್ ಬಾಯಾರ್, ಕಾರ್ಯದರ್ಶಿ ಜಯರಾಮ ಬಿ.ಎನ್., ಮಾಜಿ ಅಧ್ಯಕ್ಷರಾದ ಉದಯ ಕೋಲಾಡಿ, ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ಶಶಿಧರ ಕಿನ್ನಿಮಜಲು ಮೊದಲಾದವರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.