ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಮೃತ್ತಿಕೆ ಸಂಗ್ರಹ ಅಭಿಯಾನ ರಥಕ್ಕೆ ಕುಂಬ್ರದಲ್ಲಿ ಅದ್ಧೂರಿ ಸ್ವಾಗತ

0

ಪುತ್ತೂರು: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರವರ 108 ಅಡಿ ಎತ್ತರದ ಪ್ರತಿಮೆ, ಥೀಮ್ ಪಾರ್ಕ್‌ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಪುತ್ತೂರು ತಾಲೂಕು ಪಂಚಾಯತ್ ಇದರ ಆಶ್ರಯದಲ್ಲಿ ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಥೀಮ್ ಪಾರ್ಕ್ ಮೃತ್ತಿಕೆ ಸಂಗ್ರಹ ಅಭಿಯಾನ ಹಾಗೂ ರಥ ಸಂಚಾರ ನ.03 ರಂದು ಆರಂಭಗೊಂಡಿದ್ದು ರಥಕ್ಕೆ ಕುಂಬ್ರದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಕೆಯ್ಯೂರು, ಕೆದಂಬಾಡಿ ಮತ್ತು ಒಳಮೊಗ್ರು ಗ್ರಾಮ ಪಂಚಾಯತ್‌ನ ಅಧಿಕಾರಿ ವರ್ಗದವರು, ಸದಸ್ಯರುಗಳು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ರಥ ಯಾತ್ರೆಯ ನಾಲ್ಕು ತಾಲೂಕುಗಳ ಜವಬ್ದಾರಿ ವಹಿಸಿಕೊಂಡಿರುವ ಪುರುಷೋತ್ತಮ ಮುಂಗ್ಲಿಮನೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಾಡಪ್ರಭು ಕೆಂಪೇಗೌಡ ರಥಕ್ಕೆ ಮೂರು ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು,ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಹೂ ಹಾರ ಹಾಕಿ, ಪುಷ್ಪಾರ್ಚನೆ ಮಾಡಿದರು ಬಳಿಕ ಮೃತ್ತಿಕೆಯನ್ನು ಚೀಲಕ್ಕೆ ಹಾಕುವ ಮೂಲಕ ಕೆಂಪೇಗೌಡರಿಗೆ ಜೈಕಾರ ಹಾಕಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ನೋಡೆಲ್ ಅಧಿಕಾರಿ ವಸಂತ್, ಗಣೇಶ್ ನೈತಾಡಿ, ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕೆದಂಬಾಡಿ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ, ಕೆಯ್ಯೂರು ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಅಭಿವೃದ್ಧಿ ಅಧಿಕಾರಿ ನಮಿತಾ ಕೆ ಸೇರಿದಂತೆ ಮೂರು ಗ್ರಾಪಂನ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಅಲ್ಲದೆ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಒಳಮೊಗ್ರು ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆದು ಬಳಿಕ ಕುಂಬ್ರ ಜಂಕ್ಷನ್‌ಗೆ ರಥ ಆಗಮಿಸಿ ಅಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ, ಆಡಳಿತ, ಥೀಮ್ ಪಾರ್ಕ್ ಕುರಿತಂತೆ ಸಾಕ್ಷ್ಯಚಿತ್ರ ಪ್ರದರ್ಶನಗೊಂಡಿತು.

25 ಎಕರೆಯಲ್ಲಿ ಥೀಮ್ ಪಾರ್ಕ್
ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪ ಸುಮಾರು 25 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರವರ ಥೀಮ್ ಪಾರ್ಕ್ ನಿರ್ಮಾಣ, 108 ಅಡಿ ಎತ್ತರದ ಪ್ರತಿಮೆ ಅನಾವರಣ ನ.11 ರಂದು ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಇದರ ಪೂರ್ವಭಾವಿಯಾಗಿ ಜಿಲ್ಲೆಯ ತೀರ್ಥ ಕ್ಷೇತ್ರಗಳ ಮೃತ್ತಿಕೆ ಹಾಗೂ ಪ್ರತಿ ಗ್ರಾಮದ ಮೃತ್ತಿಕೆ ಸಂಗ್ರಹ ಅಭಯಾನ ರಥಕ್ಕೆ ಅ.26 ರಂದು ಮಂಗಳೂರಿನಲ್ಲಿ ಚಾಲನೆ ನೀಡಲಾಗಿತ್ತು.

LEAVE A REPLY

Please enter your comment!
Please enter your name here