ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಸ್ಥೆಯ ಕಾರ್ಯನಿರ್ವಾಹಕ ಶೈಕ್ಷಣಿಕ ನಿರ್ದೇಶಕರಾದ ರಫೀಕ್ ಮಾಸ್ಟರ್‌ರವರು ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರು.
ಸಂಸ್ಥೆಯ ಮುಖ್ಯ ಶಿಕ್ಷಕಿ ರಮ್ಲತ್.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ವಿವರಿಸಿದರು.
ಸಂಸ್ಥೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾಷಣ, ಗಾಯನ, ನೃತ್ಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಶಿಕ್ಷಕ ವೃಂದದವರು ಕೋಟಿ ಕಂಠ ಗಾಯನವನ್ನು ಹಾಡಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಿಸ್ರಿಯಾ ಮಧುರಾ, ಆಡಳಿತಾಧಿಕಾರಿ ಜಾಫರ್ ಸಾದಿಕ್, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಶಾಮಿಲ್ ಮಧುರಾ ಹನೀಫ್ ಸ್ವಾಗತಿಸಿ, ಮುಹಮ್ಮದ್ ನವಾಲ್ ವಂದಿಸಿದರು. ವಿದ್ಯಾರ್ಥಿನಿ ಫಾತಿಮತ್ ಮುಬಶ್ಶಿರಾ ಕಾರ್ಯಕ್ರಮ ನಿರೂಪಿಸಿದರು.