ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ – ಗ್ರಾಮ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ

0

ನ.5ರಂದು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಪುತ್ತೂರು:ತಾಲೂಕಿನ 22 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ 32 ಗ್ರಾಮಗಳಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಪಸರಿಸುವ ನಿಟ್ಟಿನಲ್ಲಿ ಹಾಗೂ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷವಾಕ್ಯದೊಂದಿಗೆ ಪುತ್ತೂರು ತಾಲೂಕು ಪಂಚಾಯತ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಕಾರದೊಂದಿಗೆ ನಿರಂತರ ಸಾಹಿತ್ಯ ಸಂಬಂಧಿತ ಸರಣಿ ಕಾರ್ಯಕ್ರಮಗಳನ್ನುನಡೆಸುವ ಯೋಜನೆ ಗ್ರಾಮ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ.ಸಾ.ಪ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು.
ಅವರು ನ.3ರಂದು ಸುದ್ದಿ ಮೀಡಿಯಾ ಸೆಂಟರ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನ.5 ರ ಶನಿವಾರ ಬೆಳಗ್ಗೆ 9:30ಕ್ಕೆ ಸರಿಯಾಗಿ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆಯಲಿದೆ. ಮಿತ್ರಂಪಾಡಿ ಜಯರಾಮ ರೈ
ಈ ಯೋಜನೆಯ ಮಹಾ ಪೋಷಕರಾಗಿದ್ದು,ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರಿನ ಶಾಸಕ ಸಂಜೀವ ಮಠಂದೂರು ನೆರವೇರಿಸಲಿದ್ದಾರೆ. ಸಹಾಯಕ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ ಪ್ರಿಯ, ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್, ನಗರಸಭಾಧ್ಯಕ್ಷರಾದ ಜೀವಂದರ್ ಜೈನ್, ಸಾಹಿತ್ಯ ಪೋಷಕ ಮಿತ್ರಂಪಾಡಿ ಜಯರಾಮ ರೈ ಮುಂತಾದ ಗಣ್ಯರು ಭಾಗಿಯಾಗಲಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಶ್ರೀ ವಿ ಬಿ ಅರ್ತಿಕಜೆ ಅವರನ್ನು ಸನ್ಮಾನಿಸಲಾಗುವುದು ಎಂದ ಉಮೇಶ್ ನಾಯಕ್ ಈಗಾಗಲೇ ಹಲವಾರು ಸಾಹಿತ್ಯ ಬಳಗಗಳು ಈ ಕಾರ್ಯಕ್ರಮವನ್ನು ಸಂಯೋಜನೆ ಮಾಡಲು ಆಸಕ್ತಿ ತೋರಿದ್ದಾರೆ. ಅವುಗಳಲ್ಲಿ ಮುಖ್ಯವಾಗಿ ಚಿಗುರೆಲೆ ಸಾಹಿತ್ಯ ಬಳಗ 15 ಗ್ರಾಮದಲ್ಲಿ, ಕಡಲೂರಿನ ಲೇಖಕರು 2 ಗ್ರಾಮಗಳಲ್ಲಿ, ಸತ್ಯಶಾಂತ ಪ್ರತಿಷ್ಠಾನ 2 ಗ್ರಾಮಗಳಲ್ಲಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು 3 ಗ್ರಾಮದಲ್ಲಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ ಕ. ಇತ್ಯಾದಿ ಸಾಹಿತ್ಯ ಬಳಗಗಳು ಗ್ರಾಮ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ನಡೆಸಲು ಆಸಕ್ತಿ ತೋರಿದೆ,ಈ ಎಲ್ಲಾ 32 ಗ್ರಾಮಗಳಲ್ಲಿ ನಡೆಯುವ ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ವಿಶೇಷವಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಮತ್ ಆಪ್ಟಿಕಲ್ಸ್ ಇವರು ಇದರ ಪ್ರಾಯೋಜಕರಾಗಿದ್ದಾರೆ.ಗ್ರಾಮ ಸಾಹಿತ್ಯ ಸಂಭ್ರಮ ನಡೆಸಲು ಸಾಹಿತ್ಯ ಆಸಕ್ತರು, ಸಾಹಿತ್ಯ ಬಳಗಗಳು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯನ್ನು ಸಂಪರ್ಕಿಸಬಹುದು ಎಂದರು.

ಪ್ರತಿ ತಿಂಗಳು ಒಂದು ಅಥವಾ ಎರಡು ಗ್ರಾಮದಲ್ಲಿ ಕವಿಗೋಷ್ಠಿ ಹಾಗೂ ಸಾಹಿತ್ಯ ಸಂಬಂಧಿತ ಕಾರ್ಯಕ್ರಮ ನಡೆಸುವುದು.
ಕಸಾಪ ಪುತ್ತೂರು ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಹಾಜಿ ಅಬೂಬಕ್ಕರ್ ಆರ್ಲಪದವು ಮಾತನಾಡಿ’ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮದ ಮೂಲಕ ನಾವು ಸ್ಥಳೀಯ ಸಾಹಿತಿಗಳ ಮಾಹಿತಿ ಸಂಗ್ರಹ,ಕನ್ನಡ ಸಾಹಿತ್ಯ ಪರಿಷತ್ ಸದಸ್ಯತ್ವದ ಅಭಿಯಾನ,ಸ್ಥಳೀಯ ಪ್ರತಿಭೆಗಳಿಗೆ ಕಲಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವುದು,ಸ್ಥಳೀಯ ಹಿರಿಯ ಸಾಹಿತಿಗಳನ್ನು ಗುರುತಿಸಿ ಗೌರವಿಸುವುದು,ನೂತನ ಕೃತಿಗಳ ಬಿಡುಗಡೆಗೆ ಅವಕಾಶ ಕಲ್ಪಿಸುವ ಉದ್ದೇಶಗಳನ್ನು ಹೊಂದಿದೆ.ಆಯಾ ಗ್ರಾಮಗಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಥವಾ ಶಾಲಾ-ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗುವುದು,ಈಗಾಗಲೇ ಮುಂದಿನ ಐದು ತಿಂಗಳ ಕಾರ್ಯಕ್ರಮದ ಯೋಜನೆಯನ್ನು ನಿಗದಿ ಮಾಡಲಾಗಿದೆ. ನವೆಂಬರ್ ಒಳಮೊಗ್ರು (ಕುಂಬ್ರ )
ಡಿಸೆಂಬರ್ -ನಿಡ್ಪಳ್ಳಿ ಗ್ರಾಮ (ಬೆಟ್ಟಂಪಾಡಿ )ಜನವರಿ -ಕೊಳ್ತಿಗೆ ಗ್ರಾಮ,ಫೆಬ್ರವರಿ -ಕೆದಂಬಾಡಿ ಗ್ರಾಮ,ಮಾರ್ಚ್ -ಅರಿಯಡ್ಕ ಗ್ರಾಮಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

LEAVE A REPLY

Please enter your comment!
Please enter your name here