ನರಿಮೊಗರು ಸರಸ್ವತಿ ವಿದ್ಯಾಮಂದಿರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ನರಿಮೊಗರಿನ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕನ್ನಡ ಧ್ವಜಾರೋಹಣವನ್ನು ವಿಶ್ರಾಂತ ಮುಖ್ಯಗುರುಗಳಾದ ವೆಂಕಟರಮಣ ಹೆಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಹಾಗೂ ಸಾಧಕರ ಮತ್ತು ಕವಿಗಳ ಬಗ್ಗೆ ಹೆಗಡೆಯವರು ವಿದ್ಯಾರ್ಥಿಗಳಿಗೆ ವಿವರಿಸಿದರು.

ಸಭಾಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ಅವಿನಾಶ್ ಕೊಡಂಕಿರಿಯವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಶುಭ ಅವಿನಾಶ್ ಕೊಡಂಕಿರಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಆಶಾಲತಾರವರು ಮಾಡಿದರು. ಮುಖ್ಯಗುರು  ರಾಜಾರಾಮ ವರ್ಮರು ಸ್ವಾಗತವನ್ನು ಮಾಡಿದರು. ಪ್ರೌಢಶಾಲೆಯ ಶಿಕ್ಷಣ ಸಂಯೋಜಕ ರಾಜಾರಾಮ ನೆಲ್ಲಿತ್ತಾಯರು ಅತಿಥಿಗಳ ಪರಿಚಯ ಮಾಡಿದರು. ಶಿಕ್ಷಕಿ ಚೇತನ ವಂದನಾರ್ಪಣೆಯನ್ನು ಮಾಡಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ನೆರವೇರಿಸಿದರು.
ಹತ್ತನೇ ತರಗತಿಯ ವಿದ್ಯಾರ್ಥಿಗಳು ‘ಹಚ್ಚೇವು ಕನ್ನಡದ ದೀಪ’ ಹಾಡಿಗೆ ನೃತ್ಯವನ್ನು ಮಾಡಿದರು.
ವಿದ್ಯಾರ್ಥಿಗಳಿಂದ ನೃತ್ಯ, ಕನ್ನಡ ನಾಡಿನ ಕುರಿತ ಹಾಡು ಮತ್ತು ಕನ್ನಡ ಧ್ವಜದ ಚಿತ್ರ ರಚನೆ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳು ಜರಗಿದವು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.