ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಪುತ್ತೂರು: ಕಾಣಿಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
7ನೇ ತರಗತಿಯ ಜೀವಿತ್ ಪಿ. ಎಸ್. 600 ಮೀ. ಓಟದಲ್ಲಿ ದ್ವಿತೀಯ ಸ್ಥಾನ, 6 ನೇ ತರಗತಿಯ ದೀಪ್ತಿ ಎಸ್. ಬಿ. ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ೬ನೇ ತರಗತಿಯ ಸಿಂಚನ ಬಿ. ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಹಾಗೂ 7ನೇ ತರಗತಿಯ ಧನ್ವಿತ್ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here