ಶಾಲಾ ಕಾಲೇಜುಗಳಲ್ಲಿ ಪ್ರತಿದಿನ 10 ನಿಮಿಷ ಧ್ಯಾನ ಕಡ್ಡಾಯ

0

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ನಿತ್ಯ 10 ನಿಮಿಷ ಮಕ್ಕಳು ಧ್ಯಾನದಲ್ಲಿ ತೊಡಗಲು ಸಮಯ ನಿಗದಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡುವ ಆದೇಶ ಅಽಕೃತವಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here