ಅಜಲಡ್ಕದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

0

ಪುತ್ತೂರು: ವಿಶ್ವ ಹಿಂದು ಪರಿಷತ್ ಬಜರಂಗದಳ ಶ್ರೀ ವಿಷ್ಣುಮೂರ್ತಿ ಶಾಖೆ ಅಜಲಡ್ಕ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಗೋ ಪೂಜೆಯು ವೇದಮೂರ್ತಿ ಶ್ರೀಕೃಷ್ಣ ಭಟ್ ಬಟ್ಯಮೂಲೆ ಇವರ ಪೌರೋಹಿತ್ಯದಲ್ಲಿ ಇತ್ತೀಚೆಗೆ ಅಜಲಡ್ಕ ಶ್ರೀ ವಿಷ್ಣುಮೂರ್ತಿ ಒತ್ತೆಕೋಲದ ಮೈದಾನದಲ್ಲಿ ನಡೆಯಿತು.

ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ| ಕೃಷ್ಣ ಪ್ರಸನ್ನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತೂರು ಗ್ರಾಮಾಂತರ ಪ್ರಖಂಡದ ಅಧ್ಯಕ್ಷ ಸಂಕಪ್ಪ ಗೌಡ ಸಭಾಧ್ಯಕ್ಷತೆ ವಹಿಸಿದ್ದರು.ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು, ಗ್ರಾಮಾಂತರ ಪ್ರಖಂಡ ಸಂಚಾಲಕ ವಿಶಾಕ್ ಶಶಿಹಿತ್ಲು, ಉದ್ಯಮಿ ಸಂತೋಷ್ ಕುಮಾರ್ ರೈ ಕೈಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನಿವೃತ್ತ ಯೋಧರಾದ ದಯಾನಂದ ಗೌಡ ನೀರ್ಪಾಡಿರವರನ್ನು ಶಾಲು,ಸ್ಮರಣಿಕೆ,ಪೇಟಾ,ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ವಿಶಾಕ್ ಶಶಿಹಿತ್ಲು ಸ್ವಾಗತಿಸಿ, ವಸಂತ ಮಲಾರ್ ಕಾರ್ಯಕ್ರಮ ನಿರೂಪಿಸಿದರು. ಪೂಜೆ ಹಾಗೂ ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here