ಚಂದ್ರಗ್ರಹಣ ಹಿನ್ನೆಲೆ ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ಬಂದ್

0

ಸುಬ್ರಹ್ಮಣ್ಯ : ಚಂದ್ರಗ್ರಹಣದ ದಿನವಾದ ನ.8ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಯಾವುದೇ ಸೇವೆಗಳು ಹಾಗೂ ಭೋಜನ ಪ್ರಸಾದ ವಿತರಣೆ ಕೂಡಾ ಇರುವುದಿಲ್ಲ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ಶ್ರೀ ದೇವರ ದರುಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9ಗಂಟೆಯಿಂದ 11.30ರ ತನಕ, ಮಧ್ಯಾಹ್ನ 2.39ರಿಂದ 6.19ರ ತನಕ, ರಾತ್ರಿ 7.30ರಿಂದ 9 ರ ತನಕ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here