ಕೊಂಬೆಟ್ಟು ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಪುತ್ತೂರು; ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು, ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವಿನ ಮೂಲಕ ನಾಗರೀಕರಣ ಸಬಲೀಕರಣ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರವು ನ.4ರಂದು ಸಂಜೆ ಕೊಂಬೆಟ್ಟು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ 2 ನೇ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಮತ್ತು ಜೆ.ಎಂ.ಎಫ್.ಸಿ ಯೋಗೇಂದ್ರ ಶೆಟ್ಟಿ ಮಾತನಾಡಿ, ಮಕ್ಕಳ ಹಿತಾಸಕ್ತಿ, ಸುರಕ್ಷತೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಜಾರಿಗೆ ತಂದಿರುವ ಪೋಕ್ಸೋ ಕಾಯಿದೆಯ ಕುರಿತು ಮಾಹಿತಿ ನೀಡಿದರು.

ವಕೀಲರ ಸಂಘದ ಕೋಶಾಧಿಕಾರಿ ಶ್ಯಾಮ್‌ಪ್ರಸಾದ್ ಕೈಲಾರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾನೂನಿನ ಮಹತ್ವಗಳ ಬಗ್ಗೆ ವಿವರಿಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಕೃಷ್ಣ ಬಿ., ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಐತ್ತಪ್ಪ ನಾಯ್ಕ, ವನಿತಾ ಸಮಾಜದ ಉಪಾಧ್ಯಕ್ಷೆ ವತ್ಸಲಾ ರಾಜ್ಞಿ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಪ್ಯಾರಾ ಲೀಗಲ್ ವಾಲೆಂಟಿಯರ್ ಶಾಂತಿ ಟಿ ಹೆಗಡೆ, ನ್ಯಾಯಾಲಯದ ಸಿಬಂದಿ ಹರೀಶ್, ವಸತಿ ನಿಲಯದ ಅಧಿಕಾರಿ, ಸಿಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.