ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜು ನೆಲ್ಯಾಡಿ ಇವರ ಸಹಯೋಗದಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಲಕ್ಷಾ ಕೆ.ಕೆ. ಅವರು ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಲಕ್ಷಾರವರು 3000 ಮೀ., 1500 ಮೀ. ಹಾಗೂ 800 ಮೀ.ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ವೈಯಕ್ತಿಕ ಚಾಂಪಿಯನ್ ಆಗಿದ್ದಾರೆ. ಈಕೆಗೆ ಶಾಲಾ ಮುಖ್ಯಶಿಕ್ಷಕ ಸತೀಶ್ಚಂದ್ರ, ಸಹ ಶಿಕ್ಷಕರ ಮಾರ್ಗದರ್ಶನದೊಂದಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಎಂ.ಬಾಲಕೃಷ್ಣರವರು ತರಬೇತಿ ನೀಡಿದ್ದರು. ಈಕೆ ಕೊಣಾಲು ಗ್ರಾಮದ ಕೊಂಬ್ಯಾನ ಕೆ.ಕೇಶವ ಗೌಡ ಹಾಗೂ ಮೋಹಿನಿ ಎಸ್.ದಂಪತಿ ಪುತ್ರಿ.