ಮಾದೇರಿ: ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಗುದ್ದಿದ ಕಾರು

0

ನೆಲ್ಯಾಡಿ: ನೆಲ್ಯಾಡಿ-ಆಲಂಕಾರು ರಸ್ತೆಯ ನೆಲ್ಯಾಡಿ ಗ್ರಾಮದ ಮಾದೇರಿ ಸಮೀಪದ ಜಾರಂಗೇಲು ಎಂಬಲ್ಲಿ ಹೊಸ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬದಿಯಲ್ಲಿನ ವಿದ್ಯುತ್ ಟ್ರಾನ್ಸ್ ಫಾರ್ಮರ್‍ನ ಕಂಬಕ್ಕೆ ಗುದ್ದಿದ ಘಟನೆ ನ.4ರಂದು ಸಂಜೆ ನಡೆದಿದೆ.
ನೆಲ್ಯಾಡಿಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಹೊಸ ಕಾರು ಜಾರಂಗೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here