ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗೆ ಅಧಿಕಾರ

ಅಧಿವೇಶನದಲ್ಲಿ ಶಾಸಕ ಸಂಜೀವ ಮಠಂದೂರು ಪ್ರಶ್ನೆಗೆ ರಾಜ್ಯ ಸರಕಾರದಿಂದ ಇದೀಗ ಬಂದ ಸುತ್ತೋಲೆ

ಪುತ್ತೂರು : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ ಅಧಿನಿಯಮ) 1978ರ ವ್ಯಾಪ್ತಿಗೊಳಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರದ ಜಮೀನಿನಲ್ಲಿ 10 ಸೆಂಟ್ಸ್ ಅಥವಾ 4 ಗುಂಟೆ ಜಮೀನಿನಲ್ಲಿ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅಧಿಕಾರ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಶಾಸಕ ಸಂಜೀವ ಮಠಂದೂರು ಅವರು ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸಿದ್ದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮನೆ ಕಟ್ಟಲು ಪಹಣಿದಾರರಿಗೆ ಭೂ ಪರಿವರ್ತನೆಗೆ ಅವಕಾಶ ನೀಡಲು ಕಾನೂನಿನ ತೊಡಕೇನು ಮತ್ತು ಅವರಿಗೆ ಭೂ ಪರಿವರ್ತನೆಗೆ ಅವಕಾಶ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಸೆ.12 ರಂದು ಅಧಿವೇಶನದಲ್ಲಿ ಚುಕ್ಕಿ ಪ್ರಶ್ನೆ ಸಲ್ಲಿಸಿದ್ದರು. ಇದಕ್ಕೆ ಉತ್ತರವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಹಾಗು ಈ ವರ್ಗದವರು ಸಮಾಜದ ಮುಖ್ಯವಾಹಿನಿಗೆ ತಂದು ಸ್ವಾವಲಂಬನೆಯಿಂದ ಜೀವಿಸಲು ಅನುಕೂಲವಾಗುವಂತೆ ಸರಕಾರವು ಈ ವರ್ಗದವರಿಗೆ ಕೃಷಿ ಚಟುವಟಿಕೆಗಳಿಗಾಗಿ ಜಮೀನುಗಳನ್ನು ಮಂಜೂರು ಮಾಡಿದೆ. ಆದರೆ ಕೆಲವು ಜಮೀನುಗಳ ಪರಭರ ನಿಷೇಧ ಕಾಯ್ದೆ 1978ರ ನ್ವಯ ಪೂರ್ವಾನುಮೋದನೆಯ ಅಗತ್ಯವಿದೆ. ಈ ಕುರಿತು ಪ್ರಯತ್ನ ಮಾಡುವ ಕುರಿತು ಕಂದಾಯ ಇಲಾಖೆ ಸಚಿವ ಆರ್ ಅಶೋಕ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದರು.

ಇದಕ್ಕೆ ಪೂರಕವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನುಗಳಲ್ಲಿ 10 ಸೆಂಟ್ಸ್ ಜಾಗವನ್ನು ಸ್ವಂತ ವಾಸದ ಹಾಗು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವಾಗ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅಥವಾ ತಹಸೀಲ್ದಾರ್‌ಗೆ ಭೂ ಪರವರ್ತನೆ ಮಾಡಲು ಸರಕಾರದ ಪೂರ್ವಾನುಮತಿ ಇಲ್ಲದೆ ಆದೇಶ ಹೊರಡಿಸುವಂತೆ ಸರಕಾರಿ ಭರವಸೆಗಳ ಸಮಿತಿ ಅಧ್ಯಕ್ಷರು ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ್ದರು. ಒಟ್ಟಿನಲ್ಲಿ ಇದೀಗ ಈ ಕುರಿತು ರಾಜ್ಯ ಸರಕಾರ ಪಿಟಿಸಿಎಲ್ ಕಾಯ್ದೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ / 4 ಗುಂಟೆ ಜಮೀನಿನಲ್ಲಿ ಸ್ವಂತ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಕೋರಿ ಮಂಜೂರಿದಾರರು ಅಥವಾ ವಾರಿಸುದಾರರು ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಅಂತಹ ಅಂರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಜಿಲ್ಲಾಧಿಕಾರಿಯವರ ಹಂತದಲ್ಲಿಯೇ ನಿಯಮಾನುಸಾರ ಭೂ ಪರಿವರ್ತನೆ ಆದೇಶ ಹೊರಡಿಸಲು ಕ್ರಮವಹಿಸಕ್ಕದ್ದು, ಹಾಗು ಸ್ವಂತ ವಾಸದ ಭೂ ಪರಿವರ್ತನೆ ಮಾಡಿದ ಆದೇಶದಲ್ಲಿ ಭೂ ಪರಿವರ್ತನೆಯಾದ ಜಮೀನನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡತಕ್ಕದಲ್ಲ ಎಂಬ ಷರತ್ತನ್ನು ವಿಧಿಸಲು ಸಹ ಸೂಚಿಸಿದೆ. ಆದರೆ ಸದರಿ ಜಮೀನನ್ನು ಮಾರಾಟ ಮಾಡಲು ಸರಕಾರದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು. ಇದರಲ್ಲಿ ಲೋಪವೇನಾದರೂ ಕಂಡು ಬಂದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೂಚಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.