ಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದದ ಅನಘ ಎಚ್.ಭಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ವತಿಯಿಂದ ರಾಮಕುಂಜ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ “ಪ್ರತಿಭಾ ಕಾರಂಜಿ”ಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿನಿ ಅನಘ ಎಚ್.ಭಟ್(ಹರಿಹರ ಭಟ್ ಕೆ. ಮತ್ತು ಮಂಜುಳಾ ಭಟ್‌ರವರ ಪುತ್ರಿ) ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here