ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ 10 ಸೆಂಟ್ಸ್ ಭೂಮಿ ಪರಿವರ್ತನೆಗೆ ಅವಕಾಶ ಹಿನ್ನೆಲೆ

0

ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಶಾಸಕರಿಗೆ ಅಭಿನಂದನೆ

ಪುತ್ತೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅವರ ಭೂಮಿಯನ್ನು ಭೂ ಪರಿವರ್ತನೆಗೆ ಅವಕಾಶ ನೀಡಬೇಕೆಂದು ವಿಧಾಸಭೆಯಲ್ಲಿ ಧ್ವನಿ ಎತ್ತಿ  ಸರಕಾರದ ಮೂಲಕ ಕಾನೂನು ಸರಳಿಕರಣಕ್ಕೆ ಕಾರಣಕರ್ತರಾದ ಶಾಸಕ ಸಂಜೀವ ಮಠಂದೂರು ಅವರನ್ನು ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದಿಂದ ಅಭಿನಂದಿಸಲಾಯಿತು.

ಹಲವು ಕಾಲಗಳ ಬೇಡಿಕೆಯಂತೆ ಸರಕಾರ ನಮಗೆ 10 ಸೆಂಟ್ಸ್ ಭೂಮಿಯನ್ನು ಭೂ ಪರಿವರ್ತನೆಗೆ ಅವಕಾಶ ನೀಡಿದೆ. ಇದಕ್ಕೆ ಮೂಲ ಕಾರಣಕರ್ತರಾದ ಶಾಸಕ ಸಂಜೀವ ಮಠಂದೂರು ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಎನ್.ಎಸ್.ಮಂಜುನಾಥ್ ಅವರು ಹೇಳಿದರು. ಬಳಿಕ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಶಾಸಕರಿಗೆ ಶಾಲು, ಹಾರ, ಫಲವಸ್ತುಗಳನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಗ್ರಾಮಾಂತರ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ಶಿವಪ್ಪ ನಾಯ್ಕ ಪೆರ್ನೆ, ಪ್ರಧಾನ ಕಾರ್ಯದರ್ಶಿ ನಾರಾಯಣ ಚಾಕೋಟೆ,ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಾಮಿ ಅಶೋಕ್‌ ಶೆಟ್ಟಿ,ನಗರ ಮಂಡಲ ಎಸ್ಟಿ ಮೋರ್ಚಾದ ಅಧ್ಯಕ್ಷ ಅಶೋಕ್ ಬಲ್ನಾಡು, ಎಸ್ಸಿ ಮೋರ್ಚಾದ ಗ್ರಾಮಾಂತರ ಮಂಡಲದ ಪ್ರಭಾರಿ ಲೋಹಿತ್ ಅಮ್ಚಿನಡ್ಕ, ಗ್ರಾಮಾಂತರ ಮಂಡಲದ ಅಧ್ಯಕ್ಷ ಬಾಬು ಬೊಮ್ಮನಗುಂಡಿ, ಪ್ರಧಾನ ಕಾರ್ಯದರ್ಶಿ ಜನಾರ್ದನ ಪೆರ್ನೆ, ಜಿಲ್ಲಾ ಸದಸ್ಯ ಕಿಟ್ಟ ಅಜಿಲ ಉಪಸ್ಥಿತರಿದ್ದರು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಬಿಜೆಪಿ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ ಶಾಸಕರ ಜೊತೆಗಿದ್ದರು.

LEAVE A REPLY

Please enter your comment!
Please enter your name here