ಕಬಕ: ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಪುತ್ತೂರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ಕಬಕ ಇವುಗಳ ಸಹಯೋಗದಲ್ಲಿ ಕಾನೂನು ಮಾಹಿತಿ ಕಾರ್ಯಾಗಾರವು ನ.7ರಂದು ಕಬಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.


ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ, ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಅರ್ಚನಾ ಕೆ ಉಣ್ಣಿತಾನ್ ಮಾತನಾಡಿ, ಕಾನೂನಿನ ಅರಿವು, ಮಹತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ಪ್ರಿಯಾ ಪಿ.ವಿ. ಮಾತನಾಡಿ, ಪೋಕ್ಸೋ ಕಾಯಿದೆಯ ಬಗ್ಗೆ ವಿವರಿಸಿದರು. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ನ್ಯಾಯಾಧೀಶ ಶಿವಣ್ಣ ಎಚ್., ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಉಮೇಶ್ ನಾಯಕ್, ಕಬಕ ಪ.ಪೂ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ ರೈ, ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು, ಹಿರಿಯ ನ್ಯಾಯವಾದಿಗಳಾದ ದೇವಾನಂದ ಕೆ., ಸತೀಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:

ಕಾರ್ಯಕ್ರಮ ಸಂಯೋಜಿಸಿದ ಶಾಂತಿ ಟಿ. ಹೆಗಡೆಯವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಉಪನ್ಯಾಸಕಿ ಲತಾಶ್ರೀ ಪ್ರಾರ್ಥಿಸಿದರು. ತಾಲೂಕು ಕಾನೂನು ಸೇವೆಗಳ ಸಮಿತಿ ಪ್ಯಾರಾ ಲೀಗಲ್ ವಾಲೆಂಟಿಯರ್ ಶಾಂತಿ ಟಿ ಹೆಗಡೆ ಸ್ವಾಗತಿಸಿದರು. ಪ್ರೌಢಶಾಲಾ ಶಿಕ್ಷಕಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಚಂದ್ರಹಾಸ ರೈ ವಂದಿಸಿದರು. ನ್ಯಾಯಾಲಯದ ಸಿಬಂದಿ ಹರೀಶ್ ಹಾಗೂ ಜ್ಯೋತಿ, ಕಾಲೇಜಿನ ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.