ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

0

ಪುತ್ತೂರು:ಇಲ್ಲಿನ ಪ್ರತಿಷ್ಠಿತ ವಸತಿಯುತ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನ.7ರಂದು ನಡೆದ ಬಗ್ಗೆ ವರದಿಯಾಗಿದೆ.
10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನ.7ರಂದು ಸಂಜೆಯಿಂದ ನಾಪತ್ತೆಯಾಗಿದ್ದಾರೆ.ಮೈಸೂರು ಮೂಲದವರಾಗಿದ್ದ ಇಬ್ಬರು ವಿದ್ಯಾರ್ಥಿಗಳೂ ಸಂಜೆ ಹೊತ್ತು ಶಾಲೆಯಲ್ಲಿದ್ದರು.ಆ ಬಳಿಕ ಅವರು ತಮ್ಮ ವಸತಿಗೆ ಹೋಗದೆ ಶಾಲೆ ಬಿಡುವ ಸಂದರ್ಭ ಪುತ್ತೂರು ಪೇಟೆಗೆ ಬಂದು ರೈಲು ನಿಲ್ದಾಣಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ.ಈ ಕುರಿತು ಶಾಲಾ ಆಡಳಿತ ಮಂಡಳಿಯವರು ಮಕ್ಕಳ ಮನೆಯವರಿಗೆ ಕರೆ ಮಾಡಿ ವಿಚಾರಿಸಿದಾಗ ಮನೆಗೂ ಹೋಗಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು.ಈ ನಿಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here