ಉಪ್ಪಿನಂಗಡಿ ವಲಯ ಮಟ್ಟದ ಕ್ರೀಡಾಕೂಟ; ಪ್ರೌಢಶಾಲಾ ವಿಭಾಗದಲ್ಲಿ ನೆಲ್ಯಾಡಿ ಬೆಥನಿಗೆ ಸಮಗ್ರ ಪ್ರಶಸ್ತಿ

ನೆಲ್ಯಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜು ನೆಲ್ಯಾಡಿ ಇವರ ಸಹಯೋಗದಲ್ಲಿ ನ.1ರಿಂದ 3ರ ತನಕ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.


ಪ್ರೌಢಶಾಲಾ ವಿಭಾಗದಲ್ಲಿ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೆಥನಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಸಮಗ್ರ ರನ್ನರ್ ಪ್ರಶಸ್ತಿ ಪಡೆದುಕೊಂಡರು. ಸಂಸ್ಥೆಯ ವಿದ್ಯಾರ್ಥಿಗಳಾದ ಸಚಿನ್ ಹಾಗೂ ಅಕ್ಷಯ್ ವೈಯುಕ್ತಿ ಚಾಂಪಿಯನ್ ಪಡೆದುಕೊಂಡರು. ಪುತ್ತೂರು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್‌ರವರು ಕ್ರೀಡಾಕೂಟ ಉದ್ಘಾಟಿಸಿದರು. ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ಬೆಥನಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಪಿ ಒಐಸಿ, ಬೆಥನಿ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು-ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.