ನಿಡ್ಪಳ್ಳಿ; ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಸಲು ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ ಮತ್ತು ಜಲ ಸಂಜೀವಿನಿ ಕಾರ್ಯಕ್ರಮದಡಿ ವಿಶೇಷ ಗ್ರಾಮ ಸಭೆ ಹಾಗೂ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನದಡಿ ಮಹಿಳಾ ಗ್ರಾಮ ಸಭೆ ನ.7 ರಂದು ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರುಪ್ಲಾ ನಾಯ್ಕ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಜಲಜೀವನ್ ಮಿಷನ್ ಯೋಜನೆಯ ಅಧಿಕಾರಿ ರವೀಶ.ಎ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ, ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್. ಬಿ, ಸದಸ್ಯರಾದ ಮುರಳೀಕೃಷ್ಣ ಮುಂಡೂರು, ತುಳಸಿ, ಜಲಜೀವನ್ ಮಿಷನ್ ಯೋಜನೆಯ ಮಹಾಂತೇಶ್ ಹಿರೇಮಠ್, ಕಡಬದ ಸ್ಮಿತಾ.ಎನ್.ಎಸ್, ನರೇಗಾದ ತೋಟಗಾರಿಕಾ ಇಂಜಿನಿಯರ್ ಆಕಾಂಕ್ಷ ರೈ.ಎ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನೆಯ ಪ್ರಭಾರ ಮೆಲ್ವೀಚಾರಕಿ ಹರಿಣಾಕ್ಷಿ.ಬಿ,ಆರೋಗ್ಯ ಸಹಾಯಕಿ ಎ.ವಿ, ಕುಸುಮಾವತಿ,ಆರೋಗ್ಯಾಧಿಕಾರಿ ಕು.ಲಕ್ಷ್ಮಿ ಚಲವಾದಿ, ಬೆಟ್ಟಂಪಾಡಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ, ಶ್ರೀ ಶಾಂತದುರ್ಗಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಚಿತ್ರ ಮತ್ತೀತರರು ಉಪಸ್ಥಿತರಿದ್ದರು.ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಮಹಿಳೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡರು.ಪಿಡಿಒ ಸಂಧ್ಯಾಲಕ್ಷ್ಮೀ ಸ್ವಾಗತಿಸಿ ವಂದಿಸಿದರು. ಸಿಬ್ಬಂದಿಗಳಾದ ರೇವತಿ ಸಂಶೀನಾ, ವಿನೀತ್ ಕುಮಾರ್, ಜಯ ಕುಮಾರಿ ಸಹಕರಿಸಿದರು.