ಡಿ. 10-11:ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರೀ ದೇವಸ್ಥಾನದ ಜಾತ್ರೋತ್ಸವ, ನೇಮೋತ್ಸವ – ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ಕೆ ಚಾಲನೆ

0

ಪುತ್ತೂರು : ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ, ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಡಿ.10 ಮತ್ತು 11 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ನ.9 ರಂದು ಶ್ರೀ ಚಕ್ರ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಚಾಲನೆ ನೀಡಲಾಯಿತು.

ಶ್ರೀ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತೂರಾಯ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಗಂಗಾಧರ ಅಮೀನ್ ಹೊಸಮನೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಿ, ಜಾತ್ರೋತ್ಸವದ ರೂಪುರೇಷೆಗಳನ್ನು ತಿಳಿಸಿ ಶುಭ ಹಾರೈಸಿದರು.

ಈ ಶುಭ ವೇಳೆ ಬ್ರಹ್ಮಕಲಶೋತ್ಸವದ ಅಧ್ಯಕ್ಷ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ, ಆರ್ಯಾಪು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮಾ ಶೆಟ್ಟಿ, ವಿಕ್ರಂ ಜೈನ್ ಬಾರಿಕೆ, ಶ್ರೀ ಕೃಷ್ಣ ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಸುವರ್ಣ ಮೇರ್ಲ, ಶ್ರೀ ಅಮ್ಮನವರ ದೇವಸ್ಥಾನದ ಕಾರ್ಯದರ್ಶಿ ಸುರೇಶ್ ಪೆಲತ್ತಡಿ, ಧನಂಜಯ ಶೆಟ್ಟಿ ಮೇರ್ಲ, ತಾರಾನಾಥ್ ಮೇರ್ಲ, ಆನಂದ ಅಮೀನ್ ಹೊಸಮನೆ, ಶೇಷಪ್ಪ ಗೌಡ (PSI), ಧನುಷ್ ಹೊಸಮನೆ, ಪವನ್ ಶೆಟ್ಟಿ, ಶ್ರೀ ಚಕ್ರ ರಾಜರಾಜೇಶ್ವರಿ ಮಹಿಳಾ ಮಂಡಳಿ ಹಾಗೂ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿಯ ಸದಸ್ಯರು ಮತ್ತು ಊರಿನ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here