ನ.11ಕ್ಕೆ ನಟರಾಜ ವೇದಿಕೆಯಲ್ಲಿ ಲಕ್ಷ್ಮೀನಾರಾಯಣ ಹೃದಯ ಹೋಮ

ಪುತ್ತೂರು: ವೈದೇಹಿ ಮತ್ತು ವೈಷ್ಣವಿ ಮಹಿಳಾ ಭಜನಾ ಮಂಡಳಿ ಬೊಳುವಾರು, ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಕನಕ ಜಯಂತಿ ಆಚರಣೆಯೊಂದಿಗೆ 10ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಲಕ್ಷ್ಮೀನಾರಾಯಣ ಹೃದಯ ಹೋಮ ನ .11 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರುಗಲಿದೆ.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ವಾಧೀಶ ವಿಠಲದಾಸ ದಾಸ ಸಂಕೀರ್ತನಾಕಾರ ರಾಮಕೃಷ್ಣ ಕಾಟುಕುಕ್ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.