ಮಕ್ಕಳ ಮಾಸೊತ್ಸವ : ಪೋಕ್ಸೋ ಕಾಯ್ದೆ ಕಾನೂನು ಮಾಹಿತಿ

ಪುತ್ತೂರು : ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು, ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢಶಾಲೆ ಸಹಕಾರದೊಂದಿಗೆ ಮಕ್ಕಳ ಮಾಸೋತ್ಸವದ ಪ್ರಯುಕ್ತ ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮ ಪುತ್ತೂರು ಬಂಟರ ಭವನದಲ್ಲಿ ನಡೆಯಿತು.

ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಹಾಗೂ ಸದಸ್ಯ ತಾಲೂಕು ಸೇವೆಗಳ ಸಮಿತಿ ಕಾರ್ಯದರ್ಶಿ ಅರ್ಚನಾ ಕೆ. ಉಣ್ಣಿತಾನ್ ಉದ್ಘಾಟಿಸಿ ಮಾತನಾಡಿ ಮಕ್ಕಳ ಬೌದ್ಧಿಕ ಬೆಳವಣಿಗೆಯೊಂದಿಗೆ ಪೂರಕವಾದ ವಾತಾವರಣ ಸೃಷ್ಟಿಸುವಲ್ಲಿ ಕಾನೂನಿನ ನೆರವು ಯಾವ ರೀತಿಯಲ್ಲಿ ದೊರಕುತ್ತದೆ ಎಂದು ಹೇಳಿದರು. ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಮಕ್ಕಳ ಅಭಿವೃದ್ಧಿಗೆ ಇಂತಹ ಮಾಹಿತಿಗಳ ಅವಶ್ಯಕತೆ ಇದೆ ಎಂದು ಹೇಳಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲ ಹೀರಾ ಉದಯ್ ಪ್ಯಾನೆಲ್ ಮಾತನಾಡಿ ಪೋಕ್ಸೋ ಕಾಯ್ದೆಯ ಮಾಹಿತಿ ನೀಡಿದರು. ತಾಲೂಕು ಬಂಟರ ಸಂಘದ ಸಂಚಾಲಕ ದಯಾನಂದ ರೈ ಮನವಳಿಕೆ ಶುಭ ಹಾರೈಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ ಮಕ್ಕಳ ಮೇಲೆ ಆಗುವಂತಹ ದೌರ್ಜನ್ಯಗಳ ಬಗ್ಗೆ ತಿಳುವಳಿಕೆ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ನಯನ ರೈ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ ಮಕ್ಕಳ ಮಾಸೋತ್ಸವದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಕೊಂಬೆಟ್ಟು ಶ್ರೀರಾಮಕೃಷ್ಣ ಪ್ರೌಢಶಾಲೆಯ ಪ್ರಭಾರ ಮುಖ್ಯಗುರು ಸುನಿತಾ ಸ್ವಾಗತಿಸಿ ಶಿಕ್ಷಕಿ ಗೀತಾ ವಂದಿಸಿದರು. ಶಿಕ್ಷಣ ಸಂಪನ್ಮೂಲದ ಸದಸ್ಯರಾದ ಅಂಬಿಕಾ ರಮೇಶ, ಪ್ರಶಾಂತ್ ಮುರ, ವತ್ಸಲ ನಾಯಕ್, ಅಶ್ವಿನಿ ರೈ, ಶಿಕ್ಷಕ ವೃಂದದವರು, ಜ್ಯೋತಿ, ಹರೀಶ್ ಹಾಗೂ ಮಕ್ಕಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.