ನರಿಮೊಗರು ಗ್ರಾ.ಪಂ ಸಭಾಂಗಣದಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

0

ಪುತ್ತೂರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಇವುಗಳ ಆಶ್ರಯದಲ್ಲಿ ನರಿಮೊಗರು ಗ್ರಾ.ಪಂನ ಸಹಯೋಗದಲ್ಲಿ `ಕಾನೂನು ಅರಿವಿನ ಮೂಲಕ ನಾಗರಿಕರಣ ಸಬಲೀಕರಣ ಅಭಿಯಾನದ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರವು ನ.10  ನರಿಮೊಗರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ಅರ್ಚನಾ ಕೆ ಉಣ್ಣಿತಾನ್ ಕಾನೂನಿನ ಮಹತ್ವಗಳ ಬಗ್ಗೆ ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ಅಕ್ಷತಜಯಕುಮಾರ್‌ರವರು ಮಹಿಳೆ ಮತ್ತು ಕಾನೂನು’ ಎಂಬ ವಿಷಯದಲ್ಲಿ ಮಾಹಿತಿ ನೀಡಿದರು. ಪಿಡಿಓ ರವಿಚಂದ್ರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಧಾಕರ್ ಕುಲಾಲ್, ಕಾರ್ಯದರ್ಶಿ ಖಲಂದರ್ ಶಾಫಿ, ಅಂಗನವಾಡಿ ಮೇಲ್ವಿಚಾರಕಿ ನಾಗರತ್ನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಕಾನೂನು ಸೇವೆಗಳ ಸಮಿತಿ ಪ್ಯಾರಾ ಲೀಗಲ್ ವಾಲೆಂಟಿಯರ್ ಶಾಂತಿ ಟಿ ಹೆಗಡೆ ಸ್ವಾಗತಿಸಿದರು.

LEAVE A REPLY

Please enter your comment!
Please enter your name here