ನ.12: ಮೂಡಂಬೈಲು ರವಿ ಶೆಟ್ಟಿ ಅಭಿನಂದನಾ ಸಮಿತಿ ಪುತ್ತೂರು ಸಾರಥ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ|ರವಿ ಶೆಟ್ಟಿ ಮೂಡಂಬೈಲುರವರಿಗೆ ನಾಗರಿಕ ಸನ್ಮಾನ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ|ರವಿ ಶೆಟ್ಟಿ ಮೂಡಂಬೈಲುರವರಿಗೆ ಮೂಡಂಬೈಲು ರವಿ ಶೆಟ್ಟಿ ಅಭಿನಂದನಾ ಸಮಿತಿ ಪುತ್ತೂರು ಸಾರಥ್ಯದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮವು ನ.12 ರಂದು ಸಂಜೆ ಮುಂಡೂರು ಪಜಿಮಣ್ಣು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯಲಿದೆ.

ಮಾಣಿಲ ಶ್ರೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ರಾಣಿ ಅಬ್ಬಕ್ಕ ತುಳು ಮ್ಯೂಸಿಯಂನ ಅಧ್ಯಕ್ಷರಾದ ಪ್ರೊ|ತುಕರಾಮರವರು ಅಭಿನಂದನಾ ಭಾಷಣಗೈಯಲಿದ್ದಾರೆ. ಅತಿಥಿಗಳಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಽಕಾರಿ ನವೀನ್ ಭಂಡಾರಿ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಉದ್ಯಮಿ ಉಮೇಶ್ ಕರ್ಕೇರಾ ನಾಡಾಜೆ, ಸಂಪ್ಯ ಅಕ್ಷಯ ಕಾಲೇಜು ಅಧ್ಯಕ್ಷ ಜಯಂತ್ ನಡುಬೈಲು, ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರುರವರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಸಂಘ-ಸಂಸ್ಥೆಗಳಿಗೆ ಮತ್ತು ಸಾರ್ವಜನಿಕರಿಗೆ, ವೇದಿಕೆಯಲ್ಲಿ ಡಾ|ರವಿ ಶೆಟ್ಟಿ ಮೂಡಂಬೈಲುರವರನ್ನು ಅಭಿನಂದಿಸಲು ಅವಕಾಶವಿದೆ. ಅಭಿನಂದಿಸುವವರು ತಮ್ಮ ಹೆಸರನ್ನು ಮೊದಲೇ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ 9980266678, 9980887303ನಂಬರಿಗೆ ಸಂಪರ್ಕಿಸಬಹುದು. ಆಗಮಿಸಿದ ಎಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಭಿನಂದನಾ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೆರೆದ ವಾಹನದಲ್ಲಿ ಮೆರವಣಿಗೆ..

ಅದೇ ದಿನ ಸಂಜೆ 4.30 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಡಾ|ರವಿ ಶೆಟ್ಟಿ ಮೂಡಂಬೈಲುರವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯೊಂದಿಗೆ ಸಭಾ ವೇದಿಕೆಗೆ ಕರೆ ತರಲಾಗುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.