‘ಪ್ರತಿದಿನ 1 ಗಂಟೆ ಹೆಚ್ಚು ಕೆಲಸ ಮಾಡಿ’ – ಸರಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ

0

ಬೆಂಗಳೂರು:‘ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೊಮ್ಮಾಯಿಯವರು, ಕೆಳಹಂತದವರೆಗೆ ಈ ಕೆಲಸವಾಗಬೇಕು. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ ಎಂದರಲ್ಲದೆ, ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.

ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸ ವಿರುತ್ತದೆ.ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ.ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ.ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು.ಪ್ರಭಾವಕ್ಕೆ ಮಣಿಯದವರು.ನ್ಯಾಯಸಮ್ಮತವಾದ 7ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ.ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ ಎಂದು ಸಿಎಂ ಹೇಳಿದರು.

LEAVE A REPLY

Please enter your comment!
Please enter your name here