ಉಪ್ಪಿನಂಗಡಿಯಲ್ಲಿ ರೈತ ವಿಜ್ಞಾನಿ ಸಂವಾದ ಕಾರ್ಯಕ್ರಮ

ಉಪ್ಪಿನಂಗಡಿ: ದ.ಕ. ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಸಂಗಮ ಕೃಪಾ ಸಭಾಭವನದಲ್ಲಿ ರೈತ ವಿಜ್ಞಾನಿ ಸಂವಾದ ಕಾರ್ಯಕ್ರಮ ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಯಶವಂತ ಜಿ. ಸಂವಾದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ರೈತರ ಅಭಿವೃದ್ಧಿ ಹಾಗೂ ಹೊಸ ಸಂಶೋಧನೆಗಳಿಗೆ ತಜ್ಞ ವಿಜ್ಞಾನಿಗಳ ಜೊತೆ ಸಂವಾದ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅಧ್ಯಕ್ಷತೆ ವಹಿಸಿ ಮಾತನಾಡಿ ಉತ್ಪಾದನೆಯಲ್ಲಿ ಹೆಚ್ಚಳ, ಗುಣಮಟ್ಟ ಹಾಗೂ ಆರ್ಥಿಕ ಪ್ರಗತಿಗೆ ರೈತರು ಹೊಸತನಕ್ಕೆ ಬರಬೇಕು. ಸಂಶೋಧನೆಯ ಮೂಲಕ ತಜ್ಞರು ಗಳಿಸಿಕೊಂಡ ವಿಚಾರವನ್ನು ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡಾಗ ಪ್ರಗತಿ ಸಾಧ್ಯಆದುದರಿಂದ ಪ್ರತಿ ರೈತರು ಇಂತಹ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೇಳಿಕೊಂಡರು.
ಮಂಗಳೂರು ತೋಟಗಾರಿಕಾ ಇಲಾಖೆಯ ಡಾ. ರಶ್ಮಿ ಪೋಷಕಾಂಶದ ನಿರ್ವಹಣೆ, ಉಪ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಡಾ. ಕೇದರ್ ನಾಥ್ ತೋಟಗಾರಿಕಾ ಬೆಳೆಗಳಿಗೆ
ಹಾನಿ ಉಂಟು ಮಾಡುವ ರೋಗ, ಕೀಟಗಳ ಬಗ್ಗೆ ನಿರ್ವಹಣೆ ಕುರಿತು, ಡಾ. ಶಿವಕುಮಾರ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣೆ ಬಗ್ಗೆ ಮಾಹಿತಿಯನ್ನು ನೀಡಿದರು.
ಉಪ ಯೋಜನಾ ನಿರ್ದೇಶಕಿ ರಶ್ಮಿ ಆತ್ಮ ಯೋಜನೆ ಮತ್ತು ಕೃಷಿ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಭರಮಣ್ಣ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಸ್ವಾಗತಿಸಿ, ಸಾಯಿನಾಥ್ ವಂದಿಸಿದರು. ಪ್ರವೀಣ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.