ಗೋಳಿತ್ತೊಟ್ಟು ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ, ಸಾಧನ ಸಮಾವೇಶ

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಇದರ ಗೋಳಿತ್ತೊಟ್ಟು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನ ಸಮಾವೇಶ ನ.11ರಂದು ಬೆಳಿಗ್ಗೆ ಆಲಂತಾಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧನ್ಯಕುಮಾರ್ ರೈ ಬಿಳಿಯೂರುಗುತ್ತು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯೆಂಬ ಬೆಳಕು ಈಗ ಜನರ ಜೀವನಕ್ಕೆ ಬೆಳಕಾಗಿ ಎಲ್ಲೆಡೆ ಪ್ರಜ್ವಲಿಸುತ್ತಿದ್ದು, ಇದು ಜಗತ್ತಿನ ಅಂಧಕಾರವನ್ನು ತೊಲಗಿಸುವಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಖಾವಂದರ ದೂರದೃಷ್ಠಿಯ ಫಲವಾಗಿ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಜನರ ಆಶಾಕಿರಣವಾಗಿ ಮೂಡಿಬಂದಿದೆ, ಯೋಜನೆಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು ಆರ್ಥಿಕ ಸ್ವಾವಲಂಬನೆಯೊಂದಿಗೆ ಗೌರವಯುತ ಬದುಕು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.

ನೂತನ ಒಕ್ಕೂಟಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಮಾತನಾಡಿದ ಯೋಜನೆಯ ಉಡುಪಿ ಕಛೇರಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್‌ರವರು, ಖಾವಂದರು ಈ ಬಾರಿ ವಿಶೇಷವಾಗಿ ವಿಕಲಚೇತನರಿಗೆ ಮಾಶಾಸನ ನೀಡುವ ಜನಮಂಗಳ ಹಾಗೂ ಮನೆಯಿಲ್ಲದ ಬಡವರಿಗೆ ಮನೆ ನೀಡುವ ವಾತ್ಸಲ್ಯ ಯೋಜನೆಯನ್ನು ಜಾರಿ ತಂದಿದ್ದಾರೆ. ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ತಳಮಟ್ಟದ ಜನರಿಗೆ ತಲುಪಿಸುವ ಹೊಣೆಗಾರಿಕೆ ಒಕ್ಕೂಟದ ಪದಾಧಿಕಾರಿಗಳ ಮೇಲಿದೆ ಎಂದರು. ಸಾಹಿತಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ನಾರಾಯಣ ಭಟ್ ಮಾತನಾಡಿ, ಯೋಜನೆಯಿಂದ ಇಂದು ಅನೇಕ ಮನೆಗಳಲ್ಲಿ ನೆಮ್ಮದಿ ಸಮೃದ್ಧಿ ತುಂಬಿದೆ, ಸುಸಂಸ್ಕೃತ ಗೌರವಯುತ ಬದುಕಿಗೆ ನಾಂದಿ ಹಾಡಿ ಜನರಲ್ಲಿ ಪರಸ್ಪರ ಸಹಕಾರ, ಮಾನವೀಯ ಮೌಲ್ಯಗಳು ಮೇಲೈಸುತ್ತಿದೆ. ಆರ್ಥಿಕ ಅಭಿವೃದ್ಧಿಗೆ ಪ್ರೇರಣೆಯಾಗಿ ಕೆಲಸ ಮಾಡುತ್ತಾ ಸದೃಢ ಸಮಾಜ ನಿರ್ಮಾಣದೊಂದಿಗೆ ಶಸಕ್ತ ನಾಡು ಕಟ್ಟುವಲ್ಲಿ ಶ್ರಮಿಸುತ್ತಿದೆ ಎಂದರು.

ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಪುತ್ತೂರು ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಸಾಧನ ಸಂಘಗಳಿಗೆ ಅಭಿನಂದನೆ ಸಲ್ಲಿಸಿದರು. ಗೋಳಿತೊಟ್ಟು ವಲಯ ಅಧ್ಯಕ್ಷ ವೀರೇಂದ್ರ ಪಾಲೆತಡ್ಡ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಗೋಳಿತೊಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಪಠೇರಿ, ಜನಜಾಗೃತಿಯ ಗೋಳಿತೊಟ್ಟು ವಲಯಾಧ್ಯಕ್ಷ ನೋಣಯ್ಯ ಅಂಬರ್ಜೆ, 1575 ನೇ ಮಧ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ, ಆಲಂತಾಯ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ್ ಸಿ.ಬಿ, ಶಾಲಾ ಮುಖ್ಯ ಶಿಕ್ಷಕಿ ಲವ್ಲೀ ಜೋಸ್ ಅತಿಥಿಗಳಾಗಿ ಮಾತನಾಡಿದರು. ಗೋಳಿತೊಟ್ಟು ಒಕ್ಕೂಟದ ಅಧ್ಯಕ್ಷೆ ಜಯಮಾಲ ಹಾಗೂ ಸಬಳೂರು ಒಕ್ಕೂಟದ ಅಧ್ಯಕ್ಷ ಗಣೇಶ್ ಎರ್ಮಡ್ಕ ಅನಿಸಿಕೆ ವ್ಯಕ್ತಪಡಿಸಿದರು. ವಲಯದ ವಿವಿಧ ಒಕ್ಕೂಟಗಳ ಅಧ್ಯಕ್ಷರುಗಳಾದ ಸಾಜು ಕೆ, ವಿಶ್ವನಾಥ ಮೂಲ್ಯ, ಲಲಿತಾ, ಪರಮೇಶ್ವರ, ಪದ್ಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಮಾಜ ಸೇವಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಶೆಟ್ಟಿ ಹೊಸಮನೆ ಹಾಗೂ ಮಾಜಿ ಸೈನಿಕ ನಾರಾಯಣ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಪ್ರಸ್ತಾವನೆಗೈದು ಸ್ವಾಗತಿಸಿದರು. ಶಾಂತಿನಗರ ಒಕ್ಕೂಟದ ಅಧ್ಯಕ್ಷ ಮಹೇಶ ಪಿ ವಂದಿಸಿದರು. ಯೋಜನೆಯ ಕಡಬ ವಲಯ ಮೇಲ್ವಿಚಾರ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರೂಪಿಸಿದರು. ಗೋಳಿತ್ತೊಟ್ಟು ವಲಯ ಮೇಲ್ವಿಚಾರಕಿ ಸುಜಾತ, ಸೇವಾ ಪ್ರತಿನಿಧಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.