ನ.13: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಬ್ರಹ್ಮಕಲಶ ಸಮಿತಿ ರಚನೆ, ಸಮಾಲೋಚನ ಸಭೆ

0

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ನೇತೃತ್ವದಲ್ಲಿ ಮಾ.5ರಿಂದ ಮಾ.10ರ ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ನ.13ರಂದು ಬ್ರಹ್ಮಕಲಶ ಸಮಿತಿ ರಚನೆ ಹಾಗೂ ಸಮಾಲೋಚನ ಸಭೆಯು ಕ್ಷೇತ್ರದಲ್ಲಿ ನಡೆಯಲಿದೆ.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀಕೃಷ್ಣ ಗುರೂಜಿಯವರು ದಿವ್ಯ ಉಪಸ್ಥಿತರಿರಲಿದ್ದಾರೆ. ಕ್ಷೇತ್ರದ ಮೊಕ್ತೇಸರರಾದ ಎಂ.ಕೆ.ಕುಕ್ಕಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರಿನ ಅಕ್ಷಯ ಕಾಲೇಜಿನ ಸಂಚಾಲಕರಾದ ಜಯಂತ ನಡುಬೈಲ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here