ನಾಲ್ವರ ಪತ್ತೆಗೆ ಲುಕೌಟ್ ನೊಟೀಸ್
ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಇತರ ನಾಲ್ವರು ಆರೋಪಿಗಳ ಪತ್ತೆಗೆ ಎನ್‌ಐಎ ಲುಕೌಟ್ ನೊಟೀಸ್ ಜಾರಿ ಮಾಡಿದೆ.ಸುಳ್ಯ ತಾಲೂಕು ಬೆಳ್ಳಾರೆ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ.ಎಚ್.,ಸುಳ್ಯ ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧೀಕ್ ಯಾನೆ ಪೈಂಟರ್ ಸಿದ್ಧೀಕ್ ಪತ್ತೆಗೆ ಲುಕೌಟ್ ನೊಟೀಸ್ ಹೊರಡಿಸಲಾಗಿದೆ.ಈ ಪೈಕಿ ಮಹಮ್ಮದ್ ಮುಸ್ತಫಾ ಮತ್ತು ತುಫೈಲ್ ಎಂ.ಎಚ್.ಪತ್ತೆಗೆ ತಲಾ 5 ಲಕ್ಷ ರೂ., ಉಳಿದಿಬ್ಬರ ಪತ್ತೆಗೆ ತಲಾ 2 ಲಕ್ಷ ರೂ.ಬಹುಮಾನ ಘೋಷಿಸಲಾಗಿದೆ.
ಪುತ್ತೂರು:ಬಿಜೆಪಿ ಯುವ ನಾಯಕರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣಕ್ಕೆ ಸಂಬಂ„ಸಿದಂತೆ ಮತ್ತೀರ್ವರನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧೀಸಿ ಈಗಾಗಲೇ ಬಂಧಿತನಾಗಿರುವ ಆರೋಪಿ, ಎಸ್‍ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34ವ.)ಮತ್ತು ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ಎಂಬವರನ್ನು ಎನ್‍ಐಎ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ.ಆದರೆ ಅಧಿಕೃತ ಮಾಹಿತಿ ಇನ್ನಷ್ಟೆ ದೊರೆಯಬೇಕಿದೆ.ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 13 ಮಂದಿ ಆರೋಪಿಗಳ ಬಂಧನವಾಗಿದೆ.
ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಪ್ರಕರಣದ ತನಿಖೆಯನ್ನು ಆರಂಭಿಸಿದ್ದ ಬೆಳ್ಳಾರೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು.ಪ್ರಕರಣದ ತನಿಖೆಯನ್ನು ಬಳಿಕ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.ನಂತರದ ಬೆಳವಣಿಗೆಗಳಲ್ಲಿ ಎನ್‍ಐಎ ಪ್ರತ್ಯೇಕ ದಿನಗಳಲ್ಲಿ ವಿವಿಧೆಡೆ ಕಾರ್ಯಾಚರಣೆ ನಡೆಸಿ ಮತ್ತೆ ಕೆಲವು ಆರೋಪಿಗಳನ್ನು ಬಂಧಿಸಿದೆ.ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಹಾಬ್, ಪಾಲ್ತಾಡಿ ಅಂಕತ್ತಡ್ಕದ ರಿಯಾಝ್ ಹಾಗೂ ಸುಳ್ಯ ಎಲಿಮಲೆಯ ಬಶೀರ್ ಅಲ್ಲದೆ, ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಪಳ್ಳಮಜಲು ನಿವಾಸಿ ಸದ್ದಾಂ, ಹ್ಯಾರಿಸ್, ಬೆಳ್ಳಾರೆ ಗೌರಿಹೊಳೆ ನೌಫಲ್,ನಾವೂರಿನ ಆಬಿದ್, ಜಟ್ಟಿಪಳ್ಳದ ಕಬೀರ್, ಬೆಳ್ಳಾರೆ ಕುನ್ನಾಗುಡ್ಡೆ ನಿವಾಸಿ ಬೆಳ್ಳಾರೆ ಗ್ರಾ.ಪಂ.ಸದಸ್ಯ ಕೆ.ಮಹಮ್ಮದ್ ಇಕ್ಬಾಲ್, ಎಸ್‍ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಇಸ್ಮಾಯಿಲ್ ಶಾಫಿ ಬೆಳ್ಳಾರೆ ಮತ್ತು ನಾವೂರು ಗಾಂಧಿನಗರ ನಿವಾಸಿ ಇಬ್ರಾಹಿಂ ಶಾ ಎಂಬವರು ಈಗಾಗಲೇ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.