ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಸಂಸ್ಥಾಪಕರ ದಿನಾಚರಣೆ

0

* ಪೆರ್ಲಂಪಾಡಿ ಷಣ್ಮುಖದೇವ ಪ್ರೌಡ ಶಾಲೆಗೆ ಆರ್ಥಿಕ ನೆರವು
* ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಪುತ್ತೂರು;ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ನ.13ರಂದು ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕರ ನೆಚ್ಚಿನ ಕ್ಷೇತ್ರವಾದ ಶೈಕ್ಷಣಿಕ ಕ್ಷೇತ್ರಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಪೆರ್ಲಂಪಾಡಿ ಷಣ್ಮುಖದೇವ ಪ್ರೌಡ ಶಾಲೆಗೆ ಆರ್ಥಿಕ ನೆರವು ಹಾಗೂ ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಮೂಲಕ ವಿಶಿಷ್ಠ ರೀತಿಯಲ್ಲಿ ಆಚರಿಸಿದರು.

ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಸಿದ ಹಿರಿಯ ನ್ಯಾಯವಾದಿ ಸುಬ್ರಹ್ಮಣ್ಯ ಕೊಳತ್ತಾಯ ಮಾತನಾಡಿ, ಪುತ್ತೂರಿನ ಎಲ್ಲಾ ಸಾಮಾಜಿಕ ಕಾರ್ಯಕ್ರಮಗಳಲ್ಲಿ ನಾವು ಜೊತೆಯಾಗಿ ದುಡಿದವರು. ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಆರ್ಥಿಕ ನೆರವು ನೀಡಿದವರು. ಮೌಂಟ್ ಎವರೆಸ್ಟ್ ಪರ್ವತದಂತ ಎತ್ತರದ ಮೇರು ವ್ಯಕ್ತಿತ್ವ ಹೊಂದಿದ್ದ ಅವರು ಪುತ್ತೂರಿನಲ್ಲಿ ನಡೆಯುವ ಬಹುತೇಕ ಕಾರ್ಯಕ್ರಮಗಳಲ್ಲಿ ಜಿ.ಎಲ್ ಆಚಾರ್ಯರವರ ಸಹಭಾಗಿತ್ವ ಪ್ರಮುಖವಾಗಿತ್ತು. ಎಲ್ಲಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುತ್ತಿದ್ದವರು. ಅವರ ಕುಟುಂಬದವರೆಲ್ಲಾ ಸ್ವರ್ಣೋದ್ಯಮದಲ್ಲಿ ತೊಡಗಿಸಿಕೊಂಡು ಗ್ರಾಹಕರಿಗೆ ಮೌಲ್ಯ, ಗುಣಮಟ್ಟದ ಸೇವೆ ನೀಡುವ ಮೂಲಕ ಪುತ್ತೂರಿಗೆ ಶೋಭೆ ತರುವ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದರು.

ವಿವೇಕಾನಂದ ವಿದ್ಯಾ ವರ್ಧಕ ಸಂಘದ ಸತೀಶ್ ರಾವ್ ಮಾತನಾಡಿ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತನನ್ನು ತೊಡಗಿಸಿಕೊಂಡಿದ್ದ ಜಿ.ಎಲ್ ಆಚಾರ್ಯರವರು ಪುತ್ತೂರಿನ ಬಹುತೇಕ ಕಾರ್ಯಕ್ರಮಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತಿದ್ದು. ಬಹಳಷ್ಟು ತಾಳ್ಮೆಯಿಂದ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು. ಬಹಳಷ್ಟು ಮಂದಿಗೆ ಉದ್ಯೋಗ ನೀಡುವ ಮೂಲಕ ಬದುಕು ಕಟ್ಟುವ ಸಂಸ್ಥೆಯಾಗಿ ಬೆಳೆಯುತ್ತಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನ ಸಂಸ್ಥಾಪಕ ದಿನಾಚರಣೆ ನಡೆಸುವುದು ಬಹಳಷ್ಟು ಸೂಕ್ತವಾಗಿದೆ ಎಂದರು.

ಸಂಸ್ಥೆಯ ಮ್ಹಾಲಕ ಬಲರಾಮ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಸಂಸ್ಥಾಪಕರಾಗಿದ್ದ ಜಿ.ಎಲ್ ಆಚಾರ್ಯರವರು ಕಳೆದ ನಾಲ್ಕು ವರ್ಷಗಳ ಹಿಂದೆ ದಿಂಗತರಾಗಿದ್ದಾರೆ. ಅವರ ಮೌಲ್ಯಗಳನ್ನು ನೆನಪಿಸಿಕೊಂಡು, ಅವುಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸಂಸ್ಥಾಪಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಂಸ್ಥಾಪಕರ ಬಹಳಷ್ಟು ನೆಚ್ಚಿನ ಕ್ಷೇತ್ರವಾಗಿದ್ದ ವಿದ್ಯಾ ಕ್ಷೇತ್ರಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲಾ ಹಳೆ ಕಟ್ಟಡ ದುರಸ್ಥಿಗೆ ಆರ್ಥಿಕ ನೆರವು ಹಾಗೂ ತೆಂಕಿಲ ನರೇಂದ್ರ ಪ.ಪೂ ಕಾಲೇಜಿನ ಐವರು ವಿದ್ಯಾರ್ಥಿಗಳಿಗೆ ತಲಾ ರೂ.೫೦೦೦ದಂತೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು ಎಂದರು.


ಆರ್ಥಿಕ ನೆರವು, ವಿದ್ಯಾರ್ಥಿ ವೇತನ:
ಸಂಸ್ಥೆಯ ಸಂಸ್ಥಾಪಕ ಜಿ.ಎಲ್ ಆಚಾರ್ಯರವರ ಬಹಳಷ್ಟು ನೆಚ್ಚಿನ ಕ್ಷೇತ್ರವಾಗಿದ್ದ ವಿದ್ಯಾ ಕ್ಷೇತ್ರಕ್ಕೆ ಸಹಕಾರ ನೀಡುವ ನಿಟ್ಟಿನಲ್ಲಿ ಪೆರ್ಲಂಪಾಡಿ ಶ್ರೀಷಣ್ಮುಖದೇವ ಪ್ರೌಢ ಶಾಲಾ ಕಟ್ಟಡ ದುರಸ್ಥಿಗೆ ನೀಡುವ ಆರ್ಥಿಕ ನೆರವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿನಿಧಿ ಸತೀಶ್ ರಾವ್ ಹಾಗೂ ತೆಂಕಿಲ ನರೇಂದ್ರ ಪ.ಪೂ ಕಾಲೇಜಿನ ಐವರು ಬಡ ವಿದ್ಯಾರ್ಥಿಗಳಿಗೆ ತಲಾ ರೂ.೫೦೦೦ದಂತೆ ನೀಡುವ ವಿದ್ಯಾರ್ಥಿ ವೇತನವನ್ನು ಕಾಲೇಜಿನ ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯರವರಿಗೆ ಹಸ್ತಾಂತರಿಸಿದರು.
ನರೇಂದ್ರ ಪ.ಪೂ ಕಾಲೇಜಿನ ಅಧ್ಯಕ್ಷ ಶ್ರೀಕಾಂತ್ ಕೊಳತ್ತಾಯ, ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನ ಲಕ್ಷ್ಮೀಕಾಂತ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು. ಮ್ಹಾಲಕ ಬಲರಾಮ ಆಚಾರ್ಯ ಸ್ವಾಗತಿಸಿ, ವಂದಿಸಿದರು

LEAVE A REPLY

Please enter your comment!
Please enter your name here