ನ.14:ಮೊಟ್ಟೆತ್ತಡ್ಕ-ಕೆಮ್ಮಿಂಜೆ ಶಾಲೆಯ ನೂತನ ಶಾಲಾ ಕೊಠಡಿಯ ಉದ್ಘಾಟನೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ದ.ಕ.ಜಿ.ಪಂ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಕೆಮ್ಮಿಂಜೆ, ದರ್ಬೆ, ಪುತ್ತೂರು ಇಲ್ಲಿ ಸುರತ್ಕಲ್ ಎನ್.ಎಂ.ಪಿ.ಟಿಯ ಸಿ.ಎಸ್.ಆರ್ ಅನುದಾನದಡಿಯಲ್ಲಿ ನಿರ್ಮಿಸಿರುವ ನೂತನ ಶಾಲಾ ಕೊಠಡಿಯ ಉದ್ಘಾಟನಾ ಸಮಾರಂಭವು ನ.14 ರಂದು ಶಾಲೆಯಲ್ಲಿ ಅಪರಾಹ್ನ ನಡೆಯಲಿದೆ.

ಉದ್ಘಾಟನೆಯನ್ನು ಶಾಸಕ ಸಂಜೀವ ಮಠಂದೂರುರವರು ನೆರವೇರಿಸಲಿದ್ದಾರೆ. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಸ್ಥಳೀಯ ನಗರಸಭಾ ಸದಸ್ಯೆ ಶೈಲಾ ಪೈ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್,ವಿಶೇಷ ಆಹ್ವಾನಿತರಾಗಿ ಅಕ್ಷಯ ಗ್ರೂಪ್ ಇದರ ಮುಖ್ಯಸ್ಥ ಜಯಂತ್ ನಡುಬೈಲುರವರು ಉಪಸ್ಥಿತರಿರುವರು.
ಈ ಕಾರ್ಯಕ್ರಮಕ್ಕೆ ಶಾಲಾ ಹಿರಿಯ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮುಖ್ಯೋಪಾಧ್ಯಾಯ ಎಸ್.ಸಂತೋಷ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ್ ಕೆ,ಶಾಲಾ ನಾಯಕ ಪುನೀತ್, ವಿದ್ಯಾರ್ಥಿ ವೃಂದ ಹಾಗೂ ಹಿರಿಯ ವಿದ್ಯಾರ್ಥಿ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here