ಪುತ್ತೂರು: ಹಿರಿಯ ಸಹಕಾರಿಗಳಾದ ದಂಬೆಕ್ಕಾನ ಸದಾಶಿವ ರೈ, ಕೊಂಕೋಡಿ ಪದ್ಮನಾಭ ಮತ್ತು ನಿತ್ಯಾನಂದ ಮುಂಡೋಡಿ ಅವರನ್ನು ರಾಜ್ಯ ಸರಕಾರ `ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ನ.18ರಂದು ಬೆಳಿಗ್ಗೆ ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಂಬೆಕ್ಕಾನ ಸದಾಶಿವ ರೈಯವರು ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದು ಡಾ.ಪಿ.ಬಿ.ರೈ ಪ್ರತಿಷ್ಠಾನ ನೂಜಿ ಇದರ ಅಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.
ಕೊಂಕೋಡಿ ಪದ್ಮನಾಭ ಅವರು ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಮಾಜಿ ಅಧ್ಯಕ್ಷರಾಗಿದ್ದು ಪ್ರಸ್ತುತ ನಿರ್ದೇಶಕರಾಗಿರುತ್ತಾರೆ.ನಿತ್ಯಾನಂದ ಮುಂಡೋಡಿ ಅವರು ಕಡಬ ತಾಲೂಕು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದು ಪ್ರಸ್ತುತ ಗುತ್ತಿಗಾರು ರಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ, ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರಾಗಿರುವ ಇವರು ಮಾಸ್ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Home ಚಿತ್ರ ವರದಿ ದಂಬೆಕ್ಕಾನ ಸದಾಶಿವ ರೈ, ಕೊಂಕೋಡಿ ಪದ್ಮನಾಭ, ನಿತ್ಯಾನಂದ ಮುಂಡೋಡಿಯವರಿಗೆ ರಾಜ್ಯ ಸರಕಾರದಿಂದ ಸಹಕಾರ ರತ್ನ ಪ್ರಶಸ್ತಿ...