ನೆಲ್ಯಾಡಿ: ಧರ್ಮಸ್ಥಳಕ್ಕೆ ಬಂದು ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಮಿನಿ ಬಸ್ಸೊಂದು ಕೊಕ್ಕಡ ಸಮೀಪ ಪಲ್ಟಿಯಾದ ಪರಿಣಾಮ 8 ಮಂದಿ ಗಾಯಗೊಂಡಿರುವ ಘಟನೆ ನ.13ರಂದು ಬೆಳಿಗ್ಗೆ ನಡೆದಿದೆ.
ಮಿನಿ ಬಸ್ಸಿನಲ್ಲಿ ಬೆಂಗಳೂರು ಮೂಲದ ಸುಮಾರು 18 ಮಂದಿ ಯಾತ್ರಾರ್ಥಿಗಳು ಧರ್ಮಸ್ಥಳಕ್ಕೆ ಬಂದು ಅಲ್ಲಿ ದೇವರ ದರ್ಶನ ಪಡೆದು ಬಳಿಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ಮೂಡುಬೈಲು ಎಂಬಲ್ಲಿ ಮಿನಿ ಬಸ್ಸು ಪಲ್ಟಿಯಾಗಿದೆ. ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಹೆಡ್ಕಾನ್ಸ್ಸ್ಟೇಬಲ್ಗಳಾದ ಬಾಲಕೃಷ್ಣ, ಕುಶಾಲಪ್ಪ ಹಾಗೂ ಪ್ರತಾಪ್ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.