ಕೊಣಾಲು ಶಾಲೆಯ ಸಂಜನಾ ಜಿಲ್ಲಾಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಕಡಬ ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಕೊಣಾಲು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಂಜನಾ 600 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ 400 ಮೀ.ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈಕೆ ಕೊಣಾಲು ಗ್ರಾಮದ ಕಲಾಯಿ ನಿವಾಸಿ ರವಿ ಹಾಗೂ ಜಯಂತಿಯವರ ಪುತ್ರಿ. ಈಕೆಗೆ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ.ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here