ಕಡಬದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ:ಉಪ್ಪಿನಂಗಡಿ ಸೈಂಟ್ ಮೇರಿಸ್ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಉಪ್ಪಿನಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ವತಿಯಿಂದ ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕ್ರೀಡಾ ಕೂಟದಲ್ಲಿ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಪ್ರೌಢ ಶಾಲಾ ವಿಭಾಗದಲ್ಲಿ 14 ರ ವಯೋಮಾನದಲ್ಲಿ ಅಕ್ಷರಾ ಎಂ.ಎಸ್. ಉದ್ದ ಜಿಗಿತ ಪ್ರಥಮ, 80ಮೀಟರ್ ಹರ್ಡಲ್ಸ್ ದ್ವಿತೀಯ, ಇಂಚರಾ ಎಂ.ಎಸ್. ಚಕ್ರ ಎಸೆತ ಪ್ರಥಮ, ಹಿತೈಶಿ ಜಾವೆಲಿನ್ ಎಸೆತ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ಸುಹಾನಿ ಗುಂಡು ಎಸೆತ-ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here