ದಾರಂದಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಪುತ್ತೂರು: ಕೋಡಿಂಬಾಡಿಯ ದಾರಂದಕುಕ್ಕು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಧನ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೋಡಿಂಬಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿತಾಶ್ವ ಎಮ್.ಎ.ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯರೂ ಆಗಿರುವ ಬಾಲವಿಕಾಸ ಸಮಿತಿ ಸದಸ್ಯ ಜಯಪ್ರಕಾಶ್ ಬದಿನಾರು ಮತ್ತು ಸ್ತ್ರೀಶಕ್ತಿ ಗೊಂಚಲಿನ ಪ್ರತಿನಿಧಿ ಅನಿತಾ ಉಪಸ್ಥಿತರಿದ್ದರು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು‌. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವೇದಾವತಿ ಎನ್. ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು‌. ಸಹಾಯಕಿ ವೀಣಾ ವಂದಿಸಿದರು.

LEAVE A REPLY

Please enter your comment!
Please enter your name here