ನ.17:ಫಿಲೋಮಿನಾದಲ್ಲಿ ಅಂತರ್-ಶಾಲೆ ಪ್ರೌಢಶಾಲಾ ವಿದ್ಯಾರ್ಥಿಗಳ ‘ಪ್ರತಿಭಾ’ ಕಲರವ

30 ಪ್ರೌಢಶಾಲೆಗಳು | 450ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ಪ್ರತಿಭೆ ಪ್ರದರ್ಶನ

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜ್‌ನ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಮತ್ತು ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲು ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಅಂತರ್-ಶಾಲಾ ಸ್ಪರ್ಧೆ ‘ಪ್ರತಿಭಾ 2019’ ಕಾರ್ಯಕ್ರಮವು ನ.17 ರಂದು ಕಾಲೇಜ್‌ನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಲಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಲು ಕಾಲೇಜು ಕಳೆದ ನಾಲ್ಕೈದು ವರ್ಷಗಳಿಂದ ‘ಪ್ರತಿಭಾ’ ಎನ್ನುವ ನಾಮದಡಿಯಲ್ಲಿ ಯಶಸ್ವಿ ಕಾರ್ಯಕ್ರಮವನ್ನು ಕಾಲೇಜ್ ಆಯೋಜಿಸುತ್ತಾ ಬಂದಿದೆ. 30 ಪ್ರೌಢಶಾಲೆಗಳಿಂದ ಸುಮಾರು 450ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ಮೆರುಗನ್ನು ಹೆಚ್ಚಿಸಲಿದ್ದಾರೆ.

ಬೆಳಿಗ್ಗೆ ರಂಗಕರ್ಮಿ ಐ.ಕೆ ಬೊಳುವಾರುರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಯಿದೆ ದೇವುಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ಕಾಲೇಜ್ ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಲೇಜು ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೋಜಾ ಮೆಟಲ್ ಮಾರ್ಟ್ ಮಾಲಕ ದೀಪಕ್ ಮಿನೇಜಸ್‌ರವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಕಾರ್ಯಕ್ರಮದ ಮುಖ್ಯ ಸಂಯೋಜಕಿ, ಉಪನ್ಯಾಸಕಿ ಡಾ|ಆಶಾ ಸಾವಿತ್ರಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

10 ಸಾಂಸ್ಕೃತಿಕ ಸ್ಪರ್ಧೆಗಳು…

ಕಾರ್ಯಕ್ರಮದಲ್ಲಿ ರಸಪ್ರಶ್ನೆ, ಕನ್ನಡ ಹಾಗೂ ಇಂಗ್ಲೀಷ್ ಸೆಮಿನಾರ್(ವಿಚಾರ ಸಂಕಿರಣ), ಬೆಸ್ಟ್ ಔಟ್ ಆಫ್ ವೇಸ್ಟ್(ಕಸದಿಂದ ರಸ), ಪೇಂಯ್ಟಿಂಗ್(ಚಿತ್ರಕಲೆ), ಪೆನ್ಸಿಲ್ ಸ್ಕೆಚ್, ಕ್ಲೇ ಮಾಡೆಲಿಂಗ್(ಆವೆ ಮಣ್ಣಿನ ರಚನೆ), ಸೈನ್ಸ್ ಮಾಡೆಲ್(ವಿಜ್ಞಾನ ಮಾದರಿ ಪ್ರದರ್ಶನ), ಪ್ರೊಡಕ್ಟ್ ಲಾಂಚಿಂಗ್(ಹೊಸ ಉತ್ಪನ್ನಗಳ ಬಿಡುಗಡೆ), ಕೊಲಾಜ್(ತೇಪೆ ಚಿತ್ರಗಾರಿಕೆ), ಜಾನಪದ ನೃತ್ಯ ಹೀಗೆ ಹತ್ತು ಸ್ಪರ್ಧೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಸೂಸಲು ಕಾಲೇಜು ಅವಕಾಶವಿತ್ತಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.