ರಾಮಕುಂಜ ಆ.ಮಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಬಹುಮಾನ ವಿತರಣೆ

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನ.14ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿ ಎನ್.ಕೆ. ದೀಪ ಬೆಳಗಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರು ಮಾತನಾಡಿ, ವಿದ್ಯಾಥಿಗಳು ಹಿರಿಯರ ಆದರ್ಶವನ್ನು ತಮ್ಮಲ್ಲಿ ಮೈಗೂಡಿಸಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು. ಅತಿಥಿಯಾಗಿದ್ದ ರಾಮಕುಂಜ ಗ್ರಾ.ಪಂ.ಸದಸ್ಯ ಸೂರಪ್ಪ ಬರಮೇಲು ಶುಭಹಾರೈಸಿದರು. ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳಾದ ಸುಚಿತ್ರಾ, ದಿವ್ಯಾ ಪಿ, ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ, ವಿದ್ಯಾರ್ಥಿ ನಿಲಯದ ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ತಾಂತ್ರಿಕ ಸಲಹೆಗಾರ ಜಯೇಂದ್ರ ಬಂದ್ಯಾನ್, ಶಾಲಾ ನಾಯಕ ಬೆನಕೇಶ್ ಪಿ.ಕೆ., ಉಪನಾಯಕಿ ಅತಿಥಿ ಶೆಟ್ಟಿ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ವಂದಿಸಿದರು. ಸಂಸ್ಥೆಯಲ್ಲಿ ಏರ್ಪಡಿಸಲಾದ ವಿವಿಧ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ಶಾಲಾ ಸಹಶಿಕ್ಷಕಿ ದಿವ್ಯಾ ಜಿ., ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.