ವೀರಕಂಬ: ದನ ಸಾಗಾಟ ಪತ್ತೆ

0

ವಿಟ್ಲ: ಹಿಂದೂ ಸಂಘಟನೆಯ ಕಾರ್ಯಕರ್ತರು ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೊಂಬಿಲ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಕೋಡಾಜೆಯಿಂದ ಸುರಿಬೈಲ್‌ ಕಡೆಗೆ ವಾಹನವೊಂದರಲ್ಲಿ ಎರಡು ದನಗಳನ್ನು ಸಾಗಿಸಲಾಗುತ್ತಿತ್ತು ಎನ್ನುವ ಮಾಹಿತಿ ಆಧಾರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.

LEAVE A REPLY

Please enter your comment!
Please enter your name here